ಮುಂಬೈ ರೂಫ್ ಟಾಪ್ ಪಬ್ ನಲ್ಲಿ ಅಗ್ನಿ ಅವಘಡ: ಕಂಬನಿ ಮಿಡಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ

ವಾಣಿಜ್ಯ ರಾಜಧಾನಿ ಮುಂಬೈನ ಕಮಲಾ ಮಿಲ್ಸ್ ನಲ್ಲಿರುವ ರೂಫ್ ಟಾಪ್ ಪಬ್ ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿಗೀಡಾದ ಮೃತರಿಗೆ ಸಂಬಂಧಿಸಿದಂತೆ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ.
ಮುಂಬೈ ಅಗ್ನಿ ದುರಂತ
ಮುಂಬೈ ಅಗ್ನಿ ದುರಂತ
ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನ ಕಮಲಾ ಮಿಲ್ಸ್ ನಲ್ಲಿರುವ ರೂಫ್ ಟಾಪ್ ಪಬ್ ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿಗೀಡಾದ ಮೃತರಿಗೆ ಸಂಬಂಧಿಸಿದಂತೆ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಮೃತರಿಗೆ ಸಂತಾಪ ಸೂಚಿಸಿರುವ ರಾಮನಾಥ್ ಕೋವಿಂದ್ ಅವರು, ಅಗ್ನಿ ದುರಂತ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತವಾಯಿತು. ದೇವರು ಮೃತರ ಕುಟುಂಬ ಸದಸ್ಯರಿಗೆ ನೋವು ತಡೆಯುವ ಶಕ್ತಿ ನೀಡಲಿ.  ಅಂತೆಯೇ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಕೋರುತ್ತೇನೆ ಎಂದು ಕೋವಿಂದ್ ಟ್ವೀಟ್ ಮಾಡಿದ್ದಾರೆ.
ಇದೇ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿದ್ದು, ಮೃತರ ಕುಟುಂಬದೊಂದಿಗೆ ಮಹಾರಾಷ್ಟ್ರ ಸರ್ಕಾರವಿದ್ದು, ಸರ್ಕಾರಕ್ಕೆ ಅಗತ್ಯ ನೆರವು ನೀಡುವುದಾಗಿ ಹೇಳಿದ್ದಾರೆ. ಅಂತೆಯೇ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಮಾಡಿಕೊಂಡಿದ್ದಾರೆ.
ಇನ್ನು ಮುಂಬೈನ ಕಮಲಾ ಮಿಲ್ಸ್ ಕಾಪೌಂಡ್ ನಲ್ಲಿರುವ ರೂಫ್ ಟಾಪ್ ಪಬ್ ನಲ್ಲಿ ಬರ್ತ್ ಡೇ ಪಾರ್ಟಿ ನಡೆಯುತ್ತಿರುವಾಗಲೇ ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಅಗ್ನಿ ದುರಂತಕ್ಕೆ ಸಿಲುಕಿದ್ದ ಮೇಲ್ಛಾವಣೆ ಪಾರ್ಚಿಯಲ್ಲಿದ್ದವರ ಮೇಲೆ ಏಕಾಏಕಿ ಬಿದ್ದಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಮಹಿಳೆಯರೂ ಸೇರಿದಂತೆ ಕನಿಷ್ಟ 15 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಪೈಕಿ 14 ಮಂದಿಯ ಹೆಸರುಗಳು ಪತ್ತೆಯಾಗಿದ್ದು ಒಂದು ಮೃತ ದೇಹದ ಗುರುತು ಪತ್ತೆಯಾಗಿಲ್ಲ.
ಪ್ರಕರಣ ದಾಖಲಿಸಿಕೊಂಡಿರುವ ಕಮಲಾ ಮಿಲ್ಸ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com