ಟ್ವಿಟರ್‌ನಲ್ಲಿ ಕಾಂಗ್ರೆಸ್ ಸಂಸದನ ಬ್ಲಾಕ್ ಮಾಡಿದ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್
ಕೇಂದ್ರ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರು ತಮ್ಮನ್ನು ಟ್ವಿಟರ್‌ನಲ್ಲಿ ಬ್ಲಾಕ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಪಂಜಾಬ್ ಕಾಂಗ್ರೆಸ್ ಮುಖಂಡ ಪ್ರತಾಪ್ ಸಿಂಗ್ ಬಾಜ್ವಾ ಅವರು ಹೇಳಿಕೊಂಡಿದ್ದಾರೆ.
ನವದೆಹಲಿ: ಕೇಂದ್ರ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರು ತಮ್ಮನ್ನು ಟ್ವಿಟರ್‌ನಲ್ಲಿ ಬ್ಲಾಕ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಪಂಜಾಬ್ ಕಾಂಗ್ರೆಸ್ ಮುಖಂಡ ಪ್ರತಾಪ್ ಸಿಂಗ್ ಬಾಜ್ವಾ ಅವರು ಹೇಳಿಕೊಂಡಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಪ್ರತಾಪ್ ಸಿಂಗ್ ಬಾಜ್ವಾ ಅವರು, ಸುಷ್ಮಾ ಸ್ವರಾಜ್ ಅವರು ತಮ್ಮ ವಿದೇಶಾಂಗ ಇಲಾಖೆಯನ್ನು ಮುನ್ನಡೆಸುತ್ತಿರುವುದು ಹೀಗೇ ಏನು? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಇರಾಕ್ ನಲ್ಲಿ 39 ಮಂದಿ ಭಾರತೀಯರು ನಾಪತ್ತೆಯಾದ ಕುರಿತು ಪ್ರಶ್ನಿಸಿದ್ದೇ ತಡ ಸಚಿವರು ತಮ್ಮನ್ನು ಬ್ಲಾಕ್ ಮಾಡಿದ್ದಾರೆ. ವಿದೇಶಾಂಗ ಸಚಿವರು ಜನಪ್ರತಿನಿಧಿಗಳನ್ನು ಬ್ಲಾಕ್ ಮಾಡಬಹುದೇ.. ಎಂದು ಬಾಜ್ವಾ ಪ್ರಶ್ನಿಸಿದ್ದಾರೆ.
ಇನ್ನು ಬಾಜ್ವಾ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ಹಲವು ಟ್ವೀಟಿಗರು, ಸರ್ಕಾರಿ ಅಧಿಕಾರವುಳ್ಳ ಸಚಿವರು ಸಾಮಾಜಿಕ ಜಾಲತಾಣಗಳಲ್ಲಿ ಯಾರನ್ನಾದರು ಬ್ಲಾಕ್ ಮಾಡಬಹುದೇ?...ಎಂದು ಹಲವರು ಪ್ರಶ್ನಿಸುತ್ತಿದ್ದರೆ, ಮತ್ತೆ ಕೆಲವರು, ಸಚಿವರು ತಮ್ಮನ್ನು ಸಹ ನಿರ್ಬಂಧಿಸಿದ್ದಾರೆಂದು ಎಂದು ಹೇಳಿಕೊಂಡಿದ್ದಾರೆ.
ಪ್ರಸ್ತುತ ಕಾಂಗ್ರೆಸ್ ಸಂಸದ ಬಾಜ್ವಾ ಅವರ ಈ ಪೋಸ್ಟ್ ವ್ಯಾಪಕ ಸುದ್ದಿಗೆ ಗ್ರಾಸವಾಗುವ ಮೂಲಕ ವೈರಲ್ ಆಗುತ್ತಿದೆ.
Is this the way to run external affairs ministry? Does it behove the office of Sushma Swaraj ji to block a Member of Parliament for asking tough questions on 39 Indians missing in Iraq? pic.twitter.com/CvYl8aLREF