ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ: ಯಾವ ಸ್ಟಾರ್ ಏನು ಹೇಳಿದರು?

ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶ ಭಾರತದಲ್ಲಿ ಸಂಚಲನ ಉಂಟುಮಾಡಿದ್ದು, ರಜನಿ ರಾಜಕೀಯ ಪ್ರವೇಶ ಸಂಬಂಧ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ನವದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶ ಭಾರತದಲ್ಲಿ ಸಂಚಲನ ಉಂಟುಮಾಡಿದ್ದು, ರಜನಿ ರಾಜಕೀಯ ಪ್ರವೇಶ ಸಂಬಂಧ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಸೇರಿದಂತೆ ಹಲವು  ಗಣ್ಯರು ಶುಭ ಕೋರಿದ್ದಾರೆ.
ಖ್ಯಾತ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಅಮಿತಾಬ್ ಬಚ್ಚನ್, ನಟಿ ಹಾಗೂ ತಮಿಳುನಾಡು ಕಾಂಗ್ರೆಸ್ ನ ವಕ್ತಾರೆ ಖುಷ್ಬೂ, ನಟ ಅನುಪಮ್ ಖೇರ್ ಸೇರಿದಂತೆ ಹಲವು ಖ್ಯಾತ ನಾಮರು ರಜನಿ ರಾಜಕೀಯ ಪ್ರವೇಶ ಸಂಬಂಧ  ಶುಭ ಹರಸಿದ್ದಾರೆ. ಟ್ವಿಟರ್ ನಲ್ಲಿ ನಟ ಅಮಿತಾಬ್ ಬಚ್ಚನ್ ನನ್ನ ಸ್ನೇಹಿತ ರಜನಿಕಾಂತ್ ರಾಜಕೀಯ ಪ್ರವೇಶ ಮಾಡಿದ್ದು. ಸಾಮಾಜಿಕ ಪ್ರಜ್ಞೆ ಇರುವ ರಜನಿ ರಾಜಕೀಯ ಭವಿಷ್ಯಕ್ಕೆ ಶುಭ ಕೋರುತ್ತೇನೆ ಎಂದು ಹೇಳಿದ್ದಾರೆ. 
ಇನ್ನು ನಟ ಅನುಪಮ್ ಖೇರ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಅಂತಿಮವಾಗಿ ರಜನಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಜೈಹೋ ಎಂದು ಹೇಳಿದ್ದಾರೆ.
ಉಳಿದಂತೆ ವಿವಿಧ ಖ್ಯಾತನಾಮರು ಟ್ವಿಟರ್ ನಲ್ಲಿ ರಜನಿ ಶುಭ ಹರಿಸಿದ್ದು, ಈ ಟ್ವೀಟ್ ಗಳ ಪಟ್ಟಿ ಇಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com