ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ಹಾಗೂ ಶೆಲ್ ದಾಳಿಗಳನ್ನು ನಡೆಸಿದೆ. ಪರಿಣಾಮ ಓರ್ವ ಯೋಧ ಹುತಾತ್ಮನಾಗಿದ್ದಾನೆಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.