ಜಮ್ಮು-ಕಾಶ್ಮೀರ: ಗಡಿ ನುಸುಳಲು ಯತ್ನ, ಉಗ್ರರನ್ನು ಹಿಮ್ಮೆಟ್ಟಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಗಡಿ ಮೂಲಕ ಭಾರತ ಒಳ ನುಸುಳಲು ಯತ್ನ ನಡೆಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹಿಮ್ಮೆಟ್ಟಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಗಡಿ ಮೂಲಕ ಭಾರತ ಒಳ ನುಸುಳಲು ಯತ್ನ ನಡೆಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹಿಮ್ಮೆಟ್ಟಿಸಿದೆ.

ಸಾಕಷ್ಟು ಶಸ್ತ್ರಸಜ್ಜಿತರಾಗಿ ಬಂದಿದ್ದ ಉಗ್ರರ ಗುಂಪೊಂದು ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಪ್ರದೇಶದ ಬಳಿ ಬಂದು ಭಾರತ ಒಳನುಸುಳಲು ಯತ್ನ ನಡೆಸುತ್ತಿದ್ದರು. ಈ ವೇಳೆ ಸೇನೆ ದಿಟ್ಟ ಉತ್ತರ ನೀಡುವ ಮೂಲಕ ಉಗ್ರರು ಕಾಲ್ಕಿತ್ತುವಂತೆ ಮಾಡಿದ್ದಾರೆ.

ದಡ್ಡ ಕಾಡುಗಳನ್ನೇ ಅನುಕೂಲಕ್ಕೆ ಬಳಸಿಕೊಳ್ಳಲು ಉಗ್ರರ ಗುಂಪು ಯತ್ನ ನಡೆಸಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಉಗ್ರರು ಬಿಎಸ್ಎಫ್ ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದರು. ಮೂರು ಅಂಡರ್ ಬ್ಯಾರೆಲ್ ಗ್ರೆನೇಡ್ ಗಳನ್ನು ಸ್ಫೋಟಿಸಿದ್ದರು. ಈ ವೇಳೆ ಕೂದಲೆಳೆಯ ಅಂತರದಲ್ಲಿ ಯೋಧನೊಬ್ಬ ಪಾರಾಗಿದ್ದಾನೆ. ನಂತರ ಉಗ್ರರಿಗೆ ಸೇನೆ ದಿಟ್ಟ ಉತ್ತರವನ್ನು ನೀಡಿ ಸ್ಥಳದಿಂದ ಕಾಲ್ಕಿತ್ತುವಂತೆ ಮಾಡಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಮ್ಮುವಿನಲ್ಲಿ ಮಂಜು ಬೀಳುತ್ತಿದ್ದು, ಇದನ್ನೇ ತಮ್ಮ ಅನುಕೂಲಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿರುವ ಉಗ್ರರು ಗಡಿ ಮೂಲಕ ಭಾರತದ ಒಳನುಸುಳಲು ಯತ್ನ ನಡೆಸುತ್ತಿದ್ದಾರೆ. ವಿಧ್ವಂಸಕ ಕೃತ್ಯವೆಸಗಲು ಉಗ್ರರು ಭಾರೀ ಸಂಚು ರೂಪಿಸುತ್ತಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಎಚ್ಚರಿಕೆ ಹಿನ್ನಲೆಯಲ್ಲಿ ಗಡಿ ನಿಯಂತ್ರಣ ರೇಖೆ ಹಾಗೂ ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಈಗಾಗಲೇ ಹೈಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com