
ಪಣಜಿ: ಗೋವಾ ರಾಜ್ಯದಲ್ಲಿ ಚುನಾವಣೆ ಆರಂಭಗೊಂಡಿರುವ ಬೆನ್ನಲ್ಲೇ ಅಕ್ರಮ ಚಟುವಟಿಕೆಗಳು ಹೆಚ್ಚಾಗತೊಡಗಿವೆ. ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 2,000 ಲೀಟರ್ ಗಳ ಮದ್ಯವನ್ನು ಅಧಿಕಾರಿಗಳು ಶುಕ್ರವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.
ಚುನಾವಣೆ ಹಿನ್ನಲೆಯಲ್ಲಿ ಮತದಾರರಿಗೆ ಆಮಿಷವೊಡ್ಡುವ ಸಲುವಾಗಿ ಮದ್ಯವನ್ನು ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಎಱಡು ಪ್ರತ್ಯೇಕ ತಾಣಗಳ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ರೂ.16.57 ಲಕ್ಷ ಮೌಲ್ಯದ 2,000 ಲೀಟರ್ ಗಳ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಬಿಟಿಮ್ ನಲ್ಲಿದ್ದ ಹೋಟೆಲ್ ವೊಲಂಟ್ ಹಾಲಿಡೇ ಹೋಮ್ ಮೇಲೆ ದಾಳಿ ಮಾಡಿದ ಅಧಿಕಾರಿಗಳು 1,422 ಲೀಟರ್ ನಷ್ಟು ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಪಣಜಿಯ ಸುಬುರ್ಬ್ ನಲ್ಲಿ ನಡೆಸಲಾದ ದಾಳಿಯಲ್ಲಿ 972 ಲೀಟರ್ ನಷ್ಟು ಮದ್ಯವನ್ನು ವಶಕ್ಕೆ ಪಡೆಯಲಾಯಿತು ಎಂದು ಚುನಾವಣಾಧಿಕಾರಿ ಕುನಾಲ್ ಅವರು ಹೇಳಿದ್ದಾರೆ.
ರೂ.16.57 ಲಕ್ಷದಷ್ಟು ಮದ್ಯವನ್ನು ವಶಕ್ಕೆ ಪಡೆಯಲಾಗಿದ್ದು, ಅಬಕಾರಿ ಕಾಯ್ದೆ ಅಡಿಯಲ್ಲಿ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Advertisement