ಸಮಾಜವಾದಿ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಅದು ತಂದೆಯವರ ಘನತೆಗೆ ಸಿಗುವ ಉಡುಗೊರೆ: ಅಖಿಲೇಶ್

ಕಾಂಗ್ರೆಸ್ ಜೊತೆಗಿನ ಸಮಾಜವಾದಿ ಪಕ್ಷದ ಮೈತ್ರಿಯನ್ನು ಸಮರ್ಥಿಸಿಕೊಂಡ...
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್
Updated on: 
ಔರಿಯಾ(ಉತ್ತರ ಪ್ರದೇಶ): ಕಾಂಗ್ರೆಸ್ ಜೊತೆಗಿನ ಸಮಾಜವಾದಿ ಪಕ್ಷದ ಮೈತ್ರಿಯನ್ನು ಸಮರ್ಥಿಸಿಕೊಂಡ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಮೈತ್ರಿಯಿಂದ ಈ ಬಾರಿಯ ಚುನಾವಣೆಯಲ್ಲಿ ಬಹುಮತದೊಂದಿಗೆ 300ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಚುನಾವಣೆ ಉತ್ತರ ಪ್ರದೇಶ ರಾಜ್ಯಕ್ಕೆ ಮಾತ್ರವಲ್ಲದೆ ಇಡೀ ದೇಶದ ರಾಜಕೀಯಕ್ಕೆ ಸಂಬಂಧಿಸಿದ್ದು. ಕಾಂಗ್ರೆಸ್ ಗೆ ಅಷ್ಟು ಸೀಟು ಬಿಟ್ಟುಕೊಡಬಾರದಿತ್ತು ಎಂದು ಜನರು ಹೇಳುತ್ತಾರೆ, ಆದರೆ ನಮ್ಮಲ್ಲಿ ಹೃದಯವಂತಿಕೆಯಿದೆ ಎಂದು ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಹೇಳಿದರು.
ತಮ್ಮ ಹಾಗೂ ತಂದೆ, ಸಮಾಜವಾದಿ ಪಕ್ಷದ ಹಿರಿಯ ಮುಲಾಯಂ ಸಿಂಗ್ ಯಾದವ್ ನಡುವಿನ ಸಂಬಂಧದ ಬಗ್ಗೆ ಮಾತನಾಡಿದ ಅವರು, ಪಕ್ಷ ಇನ್ನೂ ನೇತಾಜಿ(ತಂದೆ)ಯವರಿಗೇ ಸೇರಿದ್ದು, ತಮ್ಮ ನಡುವಿನ ಸಂಬಂಧ ಎಂದೂ ಬದಲಾಗದು ಎಂದು ಹೇಳಿದರು.
ಸಮಾಜವಾದಿ ಪಕ್ಷಕ್ಕೆ ತೊಂದರೆಯನ್ನುಂಟುಮಾಡುವವರಿಂದ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿತ್ತು. ನಮ್ಮ ತಂದೆಯವರು ನಮ್ಮನ್ನು ರಾಜಕೀಯಕ್ಕೆ ಕರೆತಂದು ತರಬೇತಿ ನೀಡಿದರು. ಅವರೊಂದಿಗೆ ನಮ್ಮ ಸಂಬಂಧವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ನೀವು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ನಮ್ಮ ವಿರುದ್ಧ ಪಿತೂರಿ ನಡೆಸಿದವರ ವಿರುದ್ಧ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿ ಬಂತು ಎಂದರು.
ಕಾಂಗ್ರೆಸ್ ನೊಂದಿಗಿನ ಮೈತ್ರಿಯ ಬಗ್ಗೆ ಮುಲಾಯಂ ಸಿಂಗ್ ಯಾದವ್ ಅವರ ಟೀಕೆಯನ್ನು ಹಿಂದಕ್ಕೆ ತಳ್ಳಲು ಪ್ರಯತ್ನಿಸಿದ ಅಖಿಲೇಶ್, ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಮತ್ತೆ ಬಂದರೆ ಅದು ತಂದೆಯವರ ಪ್ರತಿಷ್ಠೆಗೆ ಸಿಗುವ ಉಡುಗೊರೆ ಎಂದು ಹೇಳಿದರು.
ಉತ್ತರ ಪ್ರದೇಶದ ಒಟ್ಟು 403 ಕ್ಷೇತ್ರಗಳಿಗೆ 7 ಹಂತಗಳಲ್ಲಿ ಫೆಬ್ರವರಿ 11ರಿಂದ ಮಾರ್ಚ್ 8ರವರೆಗೆ ಮತದಾನ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com