ಕೇಂದ್ರ ಸರ್ಕಾರ ಕೈಗೊಂಡಿರುವ ಆರ್ಥಿಕ ಸುಧಾರಣಾ ಕ್ರಮಗಳು ತೆರಿಗೆ ಪಾವತಿ ಮಾಡುವವರ ಸಂಖ್ಯೆಯನ್ನು ಹೆಚ್ಚಿಸಲಿದ್ದು, ಸಾಮಾಜಿಕ ಭದ್ರತೆ, ಉದ್ಯೋಗ ಸೃಷ್ಟಿಗೆ ಹೂಡಿಕೆ ಮಾಡಲು ಪೂರಕವಾಗಿರಲಿದೆ
ಕೋಟಾ: ಕೇಂದ್ರ ಸರ್ಕಾರ ಕೈಗೊಂಡಿರುವ ಆರ್ಥಿಕ ಸುಧಾರಣಾ ಕ್ರಮಗಳು ತೆರಿಗೆ ಪಾವತಿ ಮಾಡುವವರ ಸಂಖ್ಯೆಯನ್ನು ಹೆಚ್ಚಿಸಲಿದ್ದು, ಸಾಮಾಜಿಕ ಭದ್ರತೆ, ಉದ್ಯೋಗ ಸೃಷ್ಟಿಗೆ ಹೂಡಿಕೆ ಮಾಡಲು ಪೂರಕವಾಗಿರಲಿದೆ ಎಂದು ಹಣಕಾಸು ಇಲಾಖೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘ್ ವಾಲ್ ತಿಳಿಸಿದ್ದಾರೆ.
ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜುಲೈ.1 ರಿಂದ ಜಿಎಸ್ ಟಿ ಹಾಗೂ ಡಿಜಿಟಲ್ ವಹಿವಾಟು ಜಾರಿಯಾಗಲಿದ್ದು, ದೇಶದ ಆರ್ಥಿಕತೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿದೆ, 2017 ಆರ್ಥಿಕ ಸುಧಾರಣೆಗಳ ವರ್ಷವಾಗಲಿದೆ ಎಂದು ಮೇಘ್ ವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೊಸ ಆರ್ಥಿಕ ಸುಧಾರಣೆಗಳು ತೆರಿಗೆ ಪಾವತಿ ಸಮಾಜವನ್ನು ಸೃಷ್ಟಿಸಲಿದ್ದು, ಸರ್ಕಾರದ ಆದಾಯ ಹೆಚ್ಚಲಿದೆ, ಇದರಿಂದಾಗಿ ಉದ್ಯೋಗ ಸೃಷ್ಟಿ ಯೋಜನೆ, ಸಾಮಾಜಿಕ ಭದ್ರತೆಗೆ ಸಂಬಂಧಿಸಿದ ಯೋಜನೆಗಳಲ್ಲಿ ಹೆಚ್ಚಿನ ಹೂಡಿಕೆ ಸಾಧ್ಯವಾಗಲಿದೆ ಎಂದು ಮೇಘ್ ವಾಲ್ ಹೇಳಿದ್ದಾರೆ.
ತೆರಿಗೆ ಪಾವತಿಗೆ ಆದಾಯ ಮಿತಿಯನ್ನು 2.50 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಿರುವ ಬಗ್ಗೆಯೂ ಮೇಘ್ ವಾಲ್ ಪ್ರತಿಕ್ರಿಯೆ ನೀಡಿದ್ದು, ಇದರಿಂದಾಗಿ ಸಣ್ಣ ಉದ್ಯಮಗಳಿಗೆ ಸಹಾಯವಾಗಲಿದೆ ಎಂದಿದ್ದಾರೆ.