ದೇಶ

ಇದೇ ಮೊದಲ ಬಾರಿಗೆ ಸೌದಿ ಅರೇಬಿಯಾದಲ್ಲಿ ಮಹಿಳಾ ದಿನ ಆಚರಣೆ!

ಸೌದಿ ಅರೇಬಿಯಾ ತನ್ನ ದೇಶದಲ್ಲಿ ಮೊದಲನೇ ಮಹಿಳಾ ದಿನಾಚರಣೆಯನ್ನು ಆಚರಿಸಿದೆ.

ಇದೇ ಮೊದಲ ಬಾರಿಗೆ ಸೌದಿ ಅರೇಬಿಯಾದಲ್ಲಿ ಮಹಿಳಾ ದಿನ ಆಚರಣೆ!
ಸೌದಿ ಅರೇಬಿಯಾದಲ್ಲಿ ಮಹಿಳಾ ದಿನಾಚರಣೆ
Published On :
ರಿಯಾಧ್: ಸೌದಿ ಅರೇಬಿಯಾ ತನ್ನ ದೇಶದಲ್ಲಿ ಮೊದಲನೇ ಮಹಿಳಾ ದಿನಾಚರಣೆಯನ್ನು  ಫೆ.6 ರಂದು ಆಚರಿಸಿದೆ. ಇಸ್ಲಾಮಿಕ್ ರಾಜಾರ ಆಡಳಿತ ಇರುವ ಸೌದಿ ಅರೇಬಿಯಾದ ರಾಜಧಾನಿ ರಿಯಾಧ್ ನ ಸಾಂಸ್ಕೃತಿಕ ಕೇಂದ್ರದಲ್ಲಿ 3 ದಿನಗಳ ಕಾರ್ಯಕ್ರಮ ನಡೆಸುವ ಮೂಲಕ ಮಹಿಳಾ ದಿನಾಚರಣೆ ಮಾಡಿದೆ. 
ಮಹಿಳಾ ಹಕ್ಕುಗಳ ಪರವಾಗಿರುವವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪುರುಷ ಪ್ರಧಾನ ವ್ಯವಸ್ಥೆಗೆ ಅಂತ್ಯ ಹಾಡಲು ಕಾರ್ಯಕ್ರಮದಲ್ಲಿ ಕರೆ ನೀಡಲಾಯಿತು. ಸೌದಿಯ ರಾಜ ಕುಟುಂಬದ ಮಹಿಳಾ ಸದಸ್ಯರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಶಿಕ್ಷಣದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಚರ್ಚಿಸಿದ್ದು ವಿಶೇಷವಾಗಿತ್ತು. 
ಸೌದಿ ಅರೇಬಿಯಾದ ಮಹಿಳೆಯರ ಯಶಸ್ಸಿಗೆ ನಾವು ಸಂಭ್ರಮಾಚರಣೆ ಮಾಡಬೇಕು, ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಆಕೆಯ ಸಾಧನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಸಾಂಕೃತಿಕ ಕೇಂದ್ರದ ವಕ್ತಾರ ಮೊಹಮ್ಮದ್ ಅಲ್-ಸೈಫ್ ಹೇಳಿದ್ದಾರೆ. ಮಹಿಳೆಯರಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡದೇ ಇರುವ ವಿಷಯಕ್ಕೆ ಸೌದಿ ಅರೇಬಿಯಾದ ರಾಜವಂಶ ತೀವ್ರ ಟೀಕೆಗೊಳಗಾಗಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.