ಮೀಸಲಾತಿಗೆ ಅಂತ್ಯ ಹಾಡಲು ಮೋದಿ ಯತ್ನಿಸುತ್ತಿದ್ದಾರೆ; ಮಾಯಾವತಿ

ಮುಸ್ಲಿಮರ ವೈಯಕ್ತಿಕ ಕಾನೂನುಗಳ ಕುರಿತಂತೆ ಮಧ್ಯೆಪ್ರವೇಶ ಮಾಡುತ್ತಿರುವ ಮೋದಿ ಸರ್ಕಾರ ಉದ್ಯೋಗ ಕುರಿತು ಹಿಂದುಳಿದ ಸಮುದಾಯಗಳಿಗಿರುವ ಮೀಸಲಾತಿಯನ್ನು ಕಿತ್ತುಕೊಳ್ಳಲು ಯತ್ನಿಸುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ...
ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ
ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ
Updated on: 

ಆಗ್ರಾ: ಮುಸ್ಲಿಮರ ವೈಯಕ್ತಿಕ ಕಾನೂನುಗಳ ಕುರಿತಂತೆ ಮಧ್ಯೆಪ್ರವೇಶ ಮಾಡುತ್ತಿರುವ ಮೋದಿ ಸರ್ಕಾರ ಉದ್ಯೋಗ ಕುರಿತು ಹಿಂದುಳಿದ ಸಮುದಾಯಗಳಿಗಿರುವ ಮೀಸಲಾತಿಯನ್ನು ಕಿತ್ತುಕೊಳ್ಳಲು ಯತ್ನಿಸುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಸೋಮವಾರ ಆರೋಪಿಸಿದ್ದಾರೆ.

ಕೋತಿ ಮೀನಾ ಬಜಾರ್ ನಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯೊಂದರಲ್ಲಿ ಮಾತನಾಡಿರು ಅವರು, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಮೈತ್ರಿಗಳಾದ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳ ವಿರುದ್ಧವೂ ಕಿಡಿಕಾರಿದ್ದಾರೆ.

ಸಛ್ಛರ್ ಸಮಿತಿಯ ಶಿಫಾರಸ್ಸಿನಂತೆ ಕೆಲಸ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ವಿದೇಶದಲ್ಲಿರುವ ಕಪ್ಪುಹಣವನ್ನು ಭಾರತಕ್ಕೆ ತರುವುದಾಗಿ ಮೋದಿ ಹೇಳಿದ್ದರು. ಆದರೆ, ಅಧಿಕಾರಕ್ಕೆ ಬಂದು ಹಲವು ಸಮಯ ಕಳೆದರೂ ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ದುಬಾರಿ ನೋಟಿನ ಮೇಲಿನ ನಿಷೇಧ ದೇಶದಲ್ಲಿರುವ ಪ್ರತೀಯೊಬ್ಬ ಪ್ರಜೆಯೂ ಸಂಕಷ್ಟಕ್ಕೆ ಸಿಲುಕುವಂತಾಗಿತ್ತು ಎಂದು ಹೇಳಿದ್ದಾರೆ.

ಮುಸ್ಲಿಮರ ವೈಯಕ್ತಿಕ ಕಾನೂನುಗಳಿಗೆ ತಲೆ ಹಾಕುತ್ತಿರುವ ಮೋದಿಯವರು, ದಲಿತರ ಮೀಸಲಾತಿಯ ಮೇಲೆ ಕಣ್ಣಿಟ್ಟಿತ್ತು. ಮೀಸಲಾತಿಗೆ ಅಂತ್ಯ ಹಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಚುನಾವಣೆ ಹಿನ್ನಲೆಯಲ್ಲಿ ಜನರಿಗೆ ಭರವಸೆಗಳನ್ನು ನೀಡಿರುವ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಉದ್ಯಮಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವ ಸಲುವಾಗಿ ಆಯೋಗವೊಂದನ್ನು ರಚಿಸಲಾಗುತ್ತದೆ. ಆಗ್ರಾ ಲೆದರ್ ಶೂ ಇಂಡಸ್ಟೀಗಾಗಿ ವಿಶೇಷ ಯೋಜನೆಗಳನ್ನು ಘೋಷಣೆ ಮಾಡುತ್ತೇದವೆ. ರೈತರ ಸಾಲಗಳನ್ನು ರೂ.1 ಲಕ್ಷದವರೆಗೂ ಮನ್ನಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com