24 ವಾರಗಳ ಗರ್ಭಿಣಿಗೆ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಸಮ್ಮತಿ

ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ಆದೇಶವೊಂದನ್ನು ನೀಡಿದ್ದು, ಮುಂಬೈ ಮೂಲದ 24 ವಾರದ ಗರ್ಭಿಣಿಯೊಬ್ಬರಿಗೆ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶ ನೀಡಿದೆ...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Updated on: 

ನವದೆಹಲಿ: ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ಆದೇಶವೊಂದನ್ನು ನೀಡಿದ್ದು, ಮುಂಬೈ ಮೂಲದ 24 ವಾರದ ಗರ್ಭಿಣಿಯೊಬ್ಬರಿಗೆ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.

ಗರ್ಭದಲ್ಲಿರುವ ಮಗು ಹಲವು ಆನಾರೋಗ್ಯದಿಂದ ಬಳಲುತ್ತಿದ್ದು, ಕೆಲ ಅಂಗಾಂಗಗಳು ಮಗುವಿನಲ್ಲಿ ಬೆಳವಣಿಗೆಯಾಗದ ಹಿನ್ನಲೆಯಲ್ಲಿ ಗರ್ಭಪಾತಕ್ಕೆ ಅನುಮತಿ ನೀಡಬೇಕೆಂದು 22 ವರ್ಷ ಮುಂಬೈ ಮೂಲದ ಮಹಿಳೆಯೊಬ್ಬರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದರಂತೆ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ವೈದ್ಯಕೀಯ ವರದಿ ಸಲ್ಲಿಸುವಂತೆ ಮುಂಬೈನ ಕೆಇಎಂ ಆಸ್ಪತ್ರೆಯ ವೈದ್ಯಕೀಯ ಮಂಡಳಿಗೆ ಸೂಚನೆ ನೀಡಿತ್ತು. ಮಹಿಳೆಯನ್ನು ತಪಾಸಣೆಗೊಳಪಡಿಸಿದ್ದ ಆಸ್ಪತ್ರೆಯ ಅಧಿಕಾರಿಗಳು ವರದಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಕೆ ಮಾಡಿದ್ದರು.

ಗರ್ಭದಲ್ಲಿರುವ ಮಗು ಅಪಸಾಮಾನ್ಯತೆಗಳಿಂದ ಬಳಲುತ್ತಿದ್ದು, ಗರ್ಭಪಾತ ಮಾಡದಿದ್ದರೆ, ತಾಯಿಯ ಜೀವಕ್ಕೆ ಅಪಾಯವಿದೆ ಎಂದು ಆಸ್ಪತ್ರೆ ವರದಿ ನೀಡಿತ್ತು. ಈ ಹಿನ್ನಲೆಯಲ್ಲಿ ಮಹತ್ವದ ಆದೇಶವನ್ನು ಹೊರಡಿಸಿರುವ ಸುಪ್ರೀಂಕೋರ್ಟ್ 6 ತಿಂಗಳ ಗರ್ಭಿಣಿಗೆ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ನೀಡಿದೆ.

ಜನವರಿ 16 ರಂದು ಇದೇ ರೀತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶವನ್ನು ಹೊರಡಿಸಿತ್ತು. ಭ್ರೂಣದ ತಲೆಬುರುಡೆ ಬೆಳೆದಿಲ್ಲದಿರುವುದರಿಂದ ಮಗು ಹುಟ್ಟಿದರೂ ಬದುಕುವುದಿಲ್ಲ ವೆಂದು ತಿಳಿದುಬಂದ ಹಿನ್ನಲೆಯಲ್ಲಿ ಸರ್ವೋಚ್ಛ ನ್ಯಾಯಲಯ ಮಹಿಳೆಯೊಬ್ಬರಿಗೆ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ನೀಡಿತ್ತು.  

ಗರ್ಭಪಾತ ಕಾಯ್ದೆಯಡಿ ತನ್ನ ಜೀವವನ್ನು ಉಳಿಸಿಕೊಳ್ಳುವ ಮಹಿಳೆಯ ಹಕ್ಕನ್ನು ಪರಿಗಣಿಸಿ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. 20 ವಾರ ಮೇಲ್ಪಟ್ಟ ಭ್ರೂಣ ತೆಗೆಸಲು ಅವಕಾಶವಿಲ್ಲ ಆದರೆ, ತಾಯಿಯ ಜೀವಕ್ಕೆ ಕುತ್ತಿ ಬರುವುದಾದರೆ 20 ವಾರ ಮೇಲ್ಪಟ್ಟ ಭ್ರೂಣ ತೆಗೆಸಲು ಅದೇ ಕಾಯ್ದೆಯ ಸೆಕ್ಷನ್ 5ರಲ್ಲಿ ಅವಕಾಶವಿದೆ ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com