ತಮಿಳುನಾಡು ರಾಜ್ಯಪಾಲರು ಶಶಿಕಲಾಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಬೇಕು: ಸುಬ್ರಹ್ಮಣಿಯನ್ ಸ್ವಾಮಿ

ಶಶಿಕಲಾ ಮುಖ್ಯಮಂತ್ರಿಯಾಗುವುದನ್ನು ವಿರೋಧಿಸಿದ್ದ ಸುಬ್ರಹ್ಮಣಿಯನ್ ಸ್ವಾಮಿ ಈಗ ಶಶಿಕಲಾ ಅವರಿಗೆ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಬೇಕು ಎಂದು ಹೇಳಿದ್ದಾರೆ.
ಸುಬ್ರಹ್ಮಣಿಯನ್ ಸ್ವಾಮಿ
ಸುಬ್ರಹ್ಮಣಿಯನ್ ಸ್ವಾಮಿ
Updated on: 
ನವದೆಹಲಿ: ತಮಿಳುನಾಡು ರಾಜಕೀಯದಲ್ಲಿ ಹಲವು ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ಜಯಲಲಿತಾ ಆಪ್ತೆ ಶಶಿಕಲಾ ಮುಖ್ಯಮಂತ್ರಿಯಾಗುವುದನ್ನು ವಿರೋಧಿಸಿದ್ದ ಸುಬ್ರಹ್ಮಣಿಯನ್ ಸ್ವಾಮಿ ಈಗ ಶಶಿಕಲಾ ಅವರಿಗೆ ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಬೇಕು ಎಂದು ಹೇಳಿದ್ದಾರೆ. 
ತಮಿಳುನಾಡಿನಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದಾಗ ಅಲ್ಲಿನ ರಾಜ್ಯಪಾಲರು ಮಹಾರಾಷ್ಟ್ರದಲ್ಲಿರಲು ಸಾಧ್ಯವಿಲ್ಲ ಎಂದು ಸಿಎನ್ಎನ್-ನ್ಯೂಸ್ 18 ಗೆ ನೀಡಿರುವ ಸಂದರ್ಶನದಲ್ಲಿ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. ಬಹುಮತ ಇರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಶಶಿಕಲಾಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಬೇಕು ಎಂದು ಸುಬ್ರಹ್ಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಶಶಿಕಲಾ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರಿಗೆ ಆಪ್ತರಾಗಿದ್ದರು. ಶಶಿಕಲಾ ಅವರನ್ನು ತೃಪ್ತಿಪಡಿಸುವುದಕ್ಕಾಗಿಯೇ ಜಯಲಲಿತಾ ಹಲವು ನಿರ್ಧಾರಗಳನ್ನು ಕೈಗೊಂಡಿದ್ದರು. ಜಯಲಲಿತಾ ಅವರನ್ನು ಸ್ನೇತರನ್ನಾಗಿ, ರಾಜಕೀಯ ಎದುರಾಳಿಯಾಗಿ ಹಲವು ವರ್ಷಗಳಿಂದ ನೋಡಿರುವುದಾಗಿ ಹೇಳಿರುವ ಸುಬ್ರಹ್ಮಣಿಯನ್ ಸ್ವಾಮಿ, ಓ. ಪನ್ನೀರ್ ಸೆಲ್ವಂ ಅವರನ್ನು ಜಯಲಲಿತಾ ರಬ್ಬರ್ ಸ್ಟ್ಯಾಂಪ್ ಎಂದೇ ಭಾವಿಸಿದ್ದರು ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com