ಅಮೇಥಿ, ರಾಯ್ ಬರೇಲಿಯಲ್ಲಿ ಪ್ರಿಯಾಂಕ ವಾಧ್ರ ಪ್ರಚಾರ

ವಿಧಾನಸಭಾ ಚುನಾವಣೆಗೆ ಸಜ್ಜುಗೊಂಡಿರುವ ಉತ್ತರ ಪ್ರದೇಶದಲ್ಲಿ ಪ್ರಚಾರ ಭರದಿಂದ ಸಾಗಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕ ವಾಧ್ರ ರಾಯ್ ಬರೇಲಿ, ಅಮೇಥಿಯಲ್ಲಿ ಪ್ರಚಾರ ನಡೆಸಲಿದ್ದಾರೆ.
ಪ್ರಿಯಾಂಕ ವಾಧ್ರ
ಪ್ರಿಯಾಂಕ ವಾಧ್ರ
ಲಖನೌ: ವಿಧಾನಸಭಾ ಚುನಾವಣೆಗೆ ಸಜ್ಜುಗೊಂಡಿರುವ ಉತ್ತರ ಪ್ರದೇಶದಲ್ಲಿ ಪ್ರಚಾರ ಭರದಿಂದ ಸಾಗಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕ ವಾಧ್ರ ರಾಯ್ ಬರೇಲಿ, ಅಮೇಥಿ ವಿಧಾನಸಭಾ ಕ್ಷೇತ್ರಗಳಲ್ಲಿ ಫೆ.13 ರಿಂದ ಪ್ರಚಾರ ನಡೆಸಲಿದ್ದಾರೆ. 
ಅಮೇಥಿ ಹಾಗೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದು, ಕಾಂಗ್ರೆಸ್ ನಾಯಕರು ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಿಯಾಂಕ ವಾಧ್ರ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. 
5 ದಿನಗಳು ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಪ್ರಿಯಾಂಕ ವಾಧ್ರ ಅವರ ಹೆಸರು ಸ್ಟಾರ್ ಚುನಾವಣಾ ಪ್ರಚಾರಕರ ಪಟ್ಟಿಯಲ್ಲಿ ಕೇಳಿಬಂದಿತ್ತು. ಆದರೆ ಸಮಾಜಕವಾದಿ ಪಕ್ಷ- ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ನಿರಾಕರಿಸಿದ್ದ ಪ್ರಿಯಾಂಕ ವಾಧ್ರ ಕೇವಲ ಅಮೇಥಿ, ರಾಯ್ ಬರೇಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. 
ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನ 10 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈ ವರೆಗೂ ಲಭ್ಯವಿರುವ ಮಾಹಿತಿ ಪ್ರಕಾರ ಪ್ರಿಯಾಂಕ ವಾಧ್ರ ಕಾಂಗ್ರೆಸ್ ನ ಅಭ್ಯರ್ಥಿಗಳ ಪರ ಮಾತ್ರ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಿಯಾಂಕ ವಾಧ್ರ ನಂತರ ಸೋನಿಯಾ ಗಾಂಧಿ ಫೆ.20 ರಂದು ತಮ್ಮ ಲೋಕಸಭಾ ಕ್ಷೇತ್ರ ರಾಯ್ ಬರೇಲಿಯಲ್ಲಿ ಪ್ರಚಾರ ನಡೆಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com