ವಿಮಾನ ನಿಲ್ದಾಣಗಳಿಗೆ ರಾಜಕೀಯ ಗಣ್ಯರ ಹೆಸರು ಬೇಡ: ಹೊಸ ಮಸೂದೆಗೆ ಕೇಂದ್ರ ಸಿದ್ಥತೆ

ದೇಶದ ಅಂತರಾಷ್ಟ್ರೀಯ ವಿಮಾನಗಳಿಗಿರುವ ರಾಜಕೀಯ ವ್ಯಕ್ತಿಗಳ ಹೆಸರನ್ನು ತೆಗೆದು ಹಾಕಿ ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ಈ ಕುರಿತಂತೆ ಶೀಘ್ರದಲ್ಲಿಯೇ ಹೊಸ ಮಸೂದೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಲಿದೆ...
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
Updated on: 

ನವದೆಹಲಿ: ದೇಶದ ಅಂತರಾಷ್ಟ್ರೀಯ ವಿಮಾನಗಳಿಗಿರುವ ರಾಜಕೀಯ ವ್ಯಕ್ತಿಗಳ ಹೆಸರನ್ನು ತೆಗೆದು ಹಾಕಿ ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ಈ ಕುರಿತಂತೆ ಶೀಘ್ರದಲ್ಲಿಯೇ ಹೊಸ ಮಸೂದೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಲಿದೆ.

ಈ ಕುರಿತಂತೆ ನಿನ್ನೆಯಷ್ಟೇ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೇಂದ್ರ ವಿಮಾನಯಾನ ಖಾತೆ ಸಹಾಯಕ ಸಚಿವ ಜಯಂತ್ ಸಿನ್ಹಾ ಅವರು, ದೇಶದ ಎಲ್ಲಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಹೆಸರುಗಳನ್ನು ವ್ಯಕ್ತಿಗಳ ಹೆಸರಿನ ಬದಲು ಕೇವಲ ಆಯಾ ಊರಿನ ಹೆಸರಿನಲ್ಲಿ ಮರುನಾಮಕರಣ ಮಾಡುವ ಪ್ರಸ್ತಾವವನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಈ ವಿಚಾರ ಪರಿಶೀಲನಯಲ್ಲಿದ್ದು, ಇದರ ಸಾಧಕ-ಬಾಧಕಗಳ ಪರಿಶೀಲನೆಯಲ್ಲಿ ಕೇಂದ್ರ ತೊಡಗಿದೆ, ಮುಂದೆ ಯಾವ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದ್ದಾರೆ.

ಇನ್ನು ವಿಮಾನ ನಿಲ್ದಾಣಗಳಿಗೆ ಗಣ್ಯರ ಹೆಸರುಗಳನ್ನು ತೆಗೆದುಹಾಕುವ ನಿರ್ಧಾರಕ್ಕೆ ಹಲವು ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಯಂತ್ ಸಿನ್ಹಾ ಅವರು, ಮಾಧ್ಯಮಗಳು ತಪ್ಪಾಗಿ ಸುದ್ದಿಯನ್ನು ಪ್ರಕಟಿಸುತ್ತಿದ್ದು, ವಿಮಾನ ನಿಲ್ದಾಣಗಳಿಗೆ ಮರುನಾಮಕರಣ ಮಾಡುವ ಬಗ್ಗೆ ಕೇಂದ್ರ ಯಾವುದೇ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಅನಾಮಧೇಯ ವಿಮಾನ ನಿಲ್ದಾಣಗಳಿಗೆ ಮಾತ್ರ ಮಾರ್ಗಸೂಚಿಗಳನ್ನು ರೂಪಿಸುತ್ತಿದೆ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com