ಉತ್ತರ ಪ್ರದೇಶ: ಮತದಾನದ ಮೇಲೆ ನಿಗಾ ಇಡಲು ಚುನಾವಣಾ ಆಯೋಗದಿಂದ ತಂತ್ರಜ್ಞಾನದ ಬಳಕೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮತದಾನದ ಮೇಲೆ ನಿಗಾ ಇಡಲು ಚುನಾವಣಾ ಆಯೋಗ ತಂತ್ರಜ್ಞಾನದ ಬಳಕೆ ಮಾಡಿಕೊಂದಿದೆ.
ಉತ್ತರ ಪ್ರದೇಶ: ಮತದಾನದ ಮೇಲೆ ನಿಗಾ ಇಡಲು ಚುನಾವಣಾ ಆಯೋಗದಿಂದ ತಂತ್ರಜ್ಞಾನದ ಬಳಕೆ
Updated on: 
ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮತದಾನದ ಮೇಲೆ ನಿಗಾ ಇಡಲು ಚುನಾವಣಾ ಆಯೋಗ ತಂತ್ರಜ್ಞಾನದ ಬಳಕೆ ಮಾಡಿಕೊಂದಿದೆ. 
14,514 ಮತ ಕೇಂದ್ರಗಳಲ್ಲಿ 2,362 ಡಿಜಿಟಲ್ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, 1,526 ವಿಡಿಯೋ ಕ್ಯಾಮರಾಗಳನ್ನು, 2,857 ವೆಬ್ ಕ್ಯಾಮರಾಗಳನ್ನು ಬಳಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯಯುತ ಮತದಾನ ನಡೆಸುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಹೇಳಿದ್ದಾರೆ.
ಮೊದಲ ಹಂತದ ಮತದಾನದಲ್ಲಿ 2.60 ಕೋಟಿ ಜನರು ಮತದಾನ ಮಾಡುತ್ತಿದ್ದು, ಮತದಾನ ಶಾಂತಿಯುತವಾಗಿ ಮುಂದುವರೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com