ಉತ್ತರ ಪ್ರದೇಶದಲ್ಲಿ ಗೋಡೆ ಕುಸಿದು ನಾಲ್ವರು ಸಾವು

ಕಾರ್ಯಕ್ರಮವೊಂದರ ವೇಳೆ ಮನೆಯ ಗೋಡೆ ಕುಸಿದು ನಾಲ್ವರು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಸುನರಾ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಶಹಜಾಹನಪುರ: ಕಾರ್ಯಕ್ರಮವೊಂದರ ವೇಳೆ ಮನೆಯ ಗೋಡೆ ಕುಸಿದು ನಾಲ್ವರು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಸುನರಾ ಗ್ರಾಮದಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮ್ ಭರೋಸೆ ಎಂಬುವವರ ಮನೆಯಲ್ಲಿ ಅವರ ಮೊಮ್ಮಗನ ನಾಮಕರಣ ಕಾರ್ಯಕ್ರಮದ ವೇಳೆ ಗೋಡೆ ಕುಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮೃತರನ್ನು ಹರಿಶ್ ಚಂದ್(20), ರಾಮ್ ಗೋಪಾಲ್(25), ರಾಮ್ ರತನ್(40) ಹಾಗೂ ರಾಮ್ ನರೇಶ್(43) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com