ಚೆನ್ನೈ: ತಮಿಳುನಾಡಿನಲ್ಲಿ ತಲೆದೋರಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಶನಿವಾರ ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಈ ಮಧ್ಯೆ, ಎಐಎಡಿಎಂಕೆ ಸಂಸದ ವಿ. ಸತ್ಯಭಾಮ ಉಸ್ತುವಾರಿ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಅವರನ್ನು ಭೇಟಿ ಮಾಡಿ ತಮ್ಮ ಬೆಂಬಲ ಸೂಚಿಸಿದ್ದಾರೆ.
ಇದಕ್ಕೂ ಮುನ್ನ ಎಐಎಡಿಎಂಕೆ ನಾಯಕ, ವಕ್ತಾರ ಸಿ. ಪೊನ್ನಯನ್, ಪನ್ನೀರ್ ಸೆಲ್ವಂ ಅವರಿಗೆ ತಮ್ಮ ಬೆಂಬಲ ನೀಡಿದ್ದಾರೆ.