ಒಟ್ಟು 73 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 9 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಬಿಜೆಪಿ, ಬಿಎಸ್ಪಿ, ಕಾಂಗ್ರೆಸ್ ಮೈತ್ರಿ ಮತ್ತು ರಾಷ್ಟ್ರೀಯ ಲೋಕದಳ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನೋಯ್ಡಾ ಕ್ಷೇತ್ರದಿಂದ ಕೇಂದ್ರ ಸಚಿವ ರಾಜನಾಥ್ ಸಿಂಗ್ ಪುತ್ರ ಪಂಕಜ್ ಸಿಂಗ್, ಮಥುರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಮಾಥೂರ್, ತಾನಾಭವನ್‌ನಿಂದ ಬಿಜೆಪಿಯ ವಿವಾದಿತ ಶಾಸಕ ಸುರೇಶ್ ರಾಣಾ ಮುಖ್ಯವಾಗಿ ಕಣದಲ್ಲಿದ್ದಾರೆ.