ದೇಶ

ಮಾತನಾಡುವ ಮೊದಲು ರಾಹುಲ್ ಗಾಂಧಿ ತಮ್ಮ ಮಾನಸಿಕ ಸ್ಥಿಮಿತ ಸರಿಮಾಡಿಕೊಳ್ಳಲಿ: ಬಿಜೆಪಿ

ನರೇಂದ್ರ ಮೋದಿ ಅವರಿಗೆ ಬಚ್ಚಲುಮನೆ ಇಣುಕುವುದರಲ್ಲೇ ಹೆಚ್ಚಿನ ಆಸಕ್ತಿ ಎಂದು ಟೀಕಿಸಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ...

ಮಾತನಾಡುವ ಮೊದಲು ರಾಹುಲ್ ಗಾಂಧಿ ತಮ್ಮ ಮಾನಸಿಕ ಸ್ಥಿಮಿತ ಸರಿಮಾಡಿಕೊಳ್ಳಲಿ: ಬಿಜೆಪಿ
ರಾಹುಲ್ ಗಾಂಧಿ
Published On :

ನವದೆಹಲಿ: ನರೇಂದ್ರ ಮೋದಿ ಅವರಿಗೆ ಬಚ್ಚಲುಮನೆ ಇಣುಕುವುದರಲ್ಲೇ ಹೆಚ್ಚಿನ ಆಸಕ್ತಿ ಎಂದು ಟೀಕಿಸಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ.

ರಾಹುಲ್ ಗಾಂಧಿ ತಮ್ಮ ವರ್ತನೆಯಿಂದ ತಮ್ಮ ಸ್ಟ್ಯಾಂಡರ್ಡ್ ತೋರಿಸಿಕೊಟ್ಟಿದ್ದಾರೆ.  ಇದಕ್ಕಿಂದ ಹೆಚ್ಚಿನದನ್ನು ಕಾಂಗ್ರೆಸ್ ನಾಯಕರಿಂದ ಬಿಜೆಪಿ ಏನನ್ನೂ ನಿರೀಕ್ಷಿಸಲಾಗದು ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿಗೆ ಏನು ಮಾತನಾಡಬೇಕು ಎಂಬುದು ತಿಳಿದಿಲ್ಲ, ಯಾವಾಗಲೂ ಗೊಂದಲದಲ್ಲಿ ಹೇಳಿಕೆ ನೀಡುತ್ತಾರೆ.ರಾಹುಲ್ ಏನಾದರೂ ಮಾತನಾಡುವ ಮೊದಲು ಅವರ ಮಾನಸಿಕ ಸ್ಥಿಮಿತತೆಯನ್ನು ಸರಿ ಮಾಡಿಕೊಳ್ಳಲಿ ಎಂದು ಸಂಸದೀಯ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ ಹರಿಹಾಯ್ದಿದ್ದಾರೆ,

ಹಿಂದಿನ ಯುಪಿಎ ಸರ್ಕಾರ ಗೃಹ ಇಲಾಖೆ ಮತ್ತು ಹಣಕಾಸು ಸಚಿವಾಲಯಗಳ ಗೂಡಾಚಾರಿಯಾಗಿದ್ದ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಜೇಮ್ಸ್ ಬಾಂಡ್ ಎಂದು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.