ತಮಿಳುನಾಡು ರಾಜ್ಯಪಾಲರಿಂದ ತಮ್ಮ ಕರ್ತವ್ಯ ನಿರ್ವಹಣೆ; ಅಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ: ಕೇಂದ್ರ

ತಮಿಳುನಾಡು ರಾಜ್ಯಕ್ಕೆ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರ ನಡೆಯನ್ನು ಕೇಂದ್ರ ಸಮರ್ಥಿಸಿಕೊಂಡಿದೆ.
ರಾಜ್ಯಪಾಲ ವಿದ್ಯಾಸಾಗರ್ ರಾವ್
ರಾಜ್ಯಪಾಲ ವಿದ್ಯಾಸಾಗರ್ ರಾವ್
Updated on

ಬೆಂಗಳೂರು: ತಮಿಳುನಾಡು ರಾಜ್ಯಕ್ಕೆ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರ ನಡೆಯನ್ನು ಕೇಂದ್ರ ಸರ್ಕಾರ ಸೋಮವಾರ ಸಮರ್ಥಿಸಿಕೊಂಡಿದೆ.

ತಮಿಳುನಾಡು ರಾಜಕೀಯ ಬಿಕ್ಕಟ್ಟು ಸಂಬಂಧ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಸಂವಿಧಾನಾತ್ಮಕವಾಗಿ ತಮ್ಮ ಕರ್ತವ್ಯವನ್ನು ನಿಷ್ಪಕ್ಷಪಾತ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. ತಮಿಳುನಾಡಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿಯೇ ಸರ್ಕಾರ ನಡೆಯುತ್ತಿದೆ. ಪನ್ನೀರ್ ಸೆಲ್ವಂ ಅವರು ರಾಜಿನಾಮೆ ಸಲ್ಲಿಸಿರುವುದಕ್ಕೆ ಬಿಜೆಪಿ ಕಾರಣವಲ್ಲ. ಜಯಲಲಿತಾ ಅವರು ಇದ್ದಾಗಲೇ ಪನ್ನೀರ್ ಸೆಲ್ವಂ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ತಮಿಳುನಾಡು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯತ್ವವನ್ನು ಹೊಂದಿಲ್ಲ. ತಮಿಳುನಾಡಿನಲ್ಲಿ ಸರ್ಕಾರ ರಚನೆ ಮಾಡುವ ಉದ್ದೇಶವೂ ನಮಗಿಲ್ಲ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಹೇಳಿಕೆಯನ್ನು ನೀಡುತ್ತಿದ್ದಾರೆ. ರಾಜಕೀಯ ಅಸ್ಥಿರಯ ಲಾಭ ಪಡೆಯಲು ನಮಗಿಷ್ಟವಿಲ್ಲ.

ಎಐಎಡಿಎಂಕೆ ನಾಯಕರೇ ಇದ್ದಕ್ಕಿದ್ದಂತೆ ಪನ್ನೀರ್ ಸೆಲ್ವಂ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದ್ದರು. ಇದರ ಹಿಂದಿರುವ ಉದ್ದೇಶವೇನು ಎಂಬುದನ್ನು ಹೇಳಲು ನಾನು ಪನ್ನೀರ್ ಸೆಲ್ವಂ ಅವರ ಪರ ವಕೀಲನಲ್ಲ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಸ್ತುತ ತಮಿಳುನಾಡು ರಾಜ್ಯಪಾಲರು ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ಸಂವಿಧಾನಾತ್ಮಕವಾಗಿ ಅವರು ಅವರ ಕರ್ತವ್ಯವವನ್ನು ನಿಭಾಯಿಸುತ್ತಿದ್ದಾರೆ. ತಮಿಳುನಾಡಿನಲ್ಲಿ ಈಗಲು ಸರ್ಕಾರ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com