ಹಿಂದೂಗಳ ಸಂಖ್ಯೆ ಕ್ಷೀಣಿಸುತ್ತಿದೆ, ಏಕೆಂದರೆ ಅವರು ಎಂದಿಗೂ ಮತಾಂತರ ಮಾಡುವುದಿಲ್ಲ: ರಿಜಿಜು

ಭಾರತದಲ್ಲಿ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚುತ್ತಿದ್ದರೆ, ಹಿಂದೂಗಳ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಕಿರಣ್ ರಿಜಿಜು
ಕಿರಣ್ ರಿಜಿಜು
ನವದೆಹಲಿ: ಭಾರತದಲ್ಲಿ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚುತ್ತಿದ್ದರೆ, ಹಿಂದೂಗಳ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. 
ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಏಕೆಂದರೆ ಹಿಂದೂಗಳು ಎಂದಿಗೂ ಅನ್ಯ ಮತದವರನ್ನು ಮತಾಂತರ ಮಾಡುವುದಿಲ್ಲ, ಆದ್ದರಿಂದಲೇ ಬೇರೆ ರಾಷ್ಟ್ರಗಳಲ್ಲಿ ಆಗದೇ ಇರುವ ರೀತಿ ನಮ್ಮಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಹೆಚ್ಚುತ್ತಿದೆ ಎಂದು ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶವನ್ನು ಹಿಂದೂ ಬಹುಸಂಖ್ಯಾತ ರಾಜ್ಯವನ್ನಾಗಿಸಲು ಹೊರಟಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ಟ್ವಿಟರ್ ನಲ್ಲಿ ಉಲ್ಲೇಖಿಸಿದ್ದು ಕಿರಣ್ ರಿಜಿಜು ಈ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಈ ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು. ಭಾರತ ಧರ್ಮ ನಿರಪೇಕ್ಷ ರಾಷ್ಟ್ರವಾಗಿದ್ದು, ಪ್ರತಿಯೊಂದು ಮತ, ಧರ್ಮದವರು ಶಾಂತಿ ಮತ್ತು ಸ್ವಾತಂತ್ರ್ಯವನ್ನು ಅನುಭವಿಸುವಂತಿರಬೇಕು ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com