

ಸೂರತ್: ಗುಜರಾತ್ ರಾಜ್ಯದ ಸೂರತ್ ನಗರದಲ್ಲಿ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 21ಕ್ಕೂ ಹೆಚ್ಚು ಮಂದಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಕಳೆದ ರಾತ್ರಿ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಒಳಗಿದ್ದ ಮಕ್ಕಳೂ ಸೇರಿದಂತೆ 21ಕ್ಕೂ ಹೆಚ್ಚು ಮಂದಿ ಗಾಯವಾಗಿರುವುದಾಗಿ ತಿಳಿದುಬಂದಿದೆ.
ಕಟ್ಟಡ ಕುಸಿತದ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳದಲ್ಲಿ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.