ಯುಇಎನಲ್ಲಿ 3 ಭಾರತೀಯರ ಸಾವು: ತನಿಖೆಗೆ ಆದೇಶಿಸಿದ ಸುಷ್ಮಾ ಸ್ವರಾಜ್

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸಾವನ್ನಪ್ಪಿದ್ದ ಮೂವರು ಭಾರತೀಯ ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸೋಮವಾರ ಆದೇಶಿಸಿದ್ದಾರೆ...
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್

ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸಾವನ್ನಪ್ಪಿದ್ದ ಮೂವರು ಭಾರತೀಯ ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸೋಮವಾರ ಆದೇಶಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಯುಇಎನ ಶರ್ಜಾಹ್ ನಲ್ಲಿರುವ ಕಚ್ಚಾ ತೈಲ ಸಂಗ್ರಹಾಗಾರದಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದರು. ಮೂವರು ಭಾರತೀಯರು ಉಸಿರುಗಟ್ಟಿ ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು. ಸಾವನ್ನಪ್ಪಿದ್ದ ಮೂವರು ಭಾರತೀಯರನ್ನು ಕಿಶಾನ್ ಸಿಂಗ್, ಮೋಹನ್ ಸಿಂಗ್ ಮತ್ತು ಉಜೇಂದ್ರ ಸಿಂಗ್ ಎಂದು ಗುರ್ತಿಸಲಾಗಿತ್ತು.

ಈ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸುಷ್ಮಾ ಸ್ವರಾಜ್ ಅವರು, ಮೃತರ ಕುಟುಂಬಕ್ಕೆ ಈ ಮೂಲಕ ಸಂತಾಪವನ್ನು ಸೂಚಿಸುತ್ತೇನೆ, ಮೃತರ ಕುಟುಂಬಕ್ಕೆ ಅಗತ್ಯವಿರುವ ಸಹಾಯ ಹಾಗೂ ಪರಿಹಾರವನ್ನು ನೀಡುತ್ತೇವೆಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಭಾರತೀಯ ಅಧಿಕಾರಿಗಳು ಪ್ರಕರಣ ಕುರಿತು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಖಾಸಗಿ ಮಾಧ್ಯಮವೊಂದು ವರದಿ ಮಾಡಿರುವ ಪ್ರಕಾರ, ಭಾರತೀಯ ಸಾವಿನ ಹಿಂದೆ ಕೆಲವರ ಕೈವಾಡವಿದ್ದು, ಈಗಾಗಲೇ ಶರ್ಜಾಹ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ಹೇಳಿಕೊಂಡಿದೆ. ಅಲ್ಲದೆ, ಮೃತದೇಹಗಳನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com