

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಓರ್ವ ಉಗ್ರರನ್ನು ಸದೆಬಡಿಯುವಲ್ಲಿ ಮಂಗಳವಾರ ಯಶಸ್ವಿಯಾಗಿದೆ.
ಬಂಡಿಪೋರದ ಹಜಿನ್ ಪ್ರದೇಶದಲ್ಲಿರುವ ಪರ್ರೆ ಮೊಹಲ್ಲಾದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು.
ಕೂಡಲೇ ಸ್ಥಳದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಲು ಮುಂದಾಗಿತ್ತು. ಈ ವೇಳೆ ಉಗ್ರರು ಸೇನೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಉಗ್ರರ ದಾಳಿಗೆ ಸೇನೆ ದಿಟ್ಟವನ್ನು ನೀಡಲು ಮುಂದಾಗಿತ್ತು. ಗುಂಡಿನ ಕಾಳಗದಲ್ಲಿ ಐವರು ಯೋಧರು ಗಾಯಗೊಂಡಿದ್ದರು.
ನಂತರ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದ ಸೇನೆ, ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದ್ದು. ಇದೀಗ ಗಾಯಗೊಂಡ ಐವರು ಯೋಧರ ಪೈಕಿ ಇದೀಗ ಮೂವರು ಯೋಧರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.