

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ನೀಡುತ್ತಿದ್ದಂತೆಯೇ ಅತ್ತ ಪನ್ನೀರ್ ಸೆಲ್ವಂ ಬಣ ಹಾಗೂ ಡಿಎಂಕೆ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಅತ್ತ ಸುಪ್ರೀಂ ಕೋರ್ಟ್ ನಲ್ಲಿ ಶಶಿಕಲಾ ವಿರುದ್ಧ ತೀರ್ಪು ಹೊರ ಬೀಳುತ್ತಿದ್ದಂತೆಯೇ ಚೆನ್ನೈನಲ್ಲಿರುವ ಸಿಎಂ ಕಚೇರಿ ಹಾಗೂ ಪನ್ನೀರ್ ಸೆಲ್ವಂ ಅವರ ನಿವಾಸದ ಎದುರ ನೆರೆದಿದ್ದ ಅಪಾರ ಬೆಂಬಲಿಗರು ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ಪನ್ನೀರ್ ಸೆಲ್ವಂ ಪರ ಘೋಷಣೆಗಳನ್ನು ಕೂಗುತ್ತಿರುವ ಬೆಂಬಲಿಗರು, ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಲ್ಲದೆ ಸಿಹಿ ಹಂಚಿ ಸಂಭ್ರಮ ನಡೆಸುತ್ತಿದ್ದಾರೆ.
ಡಿಎಂಕೆ ಸಂಭ್ರಮಾಚರಣೆ