ದೇಶ

ಬಂಡಿಪೋರದಲ್ಲಿ ಎನ್'ಕೌಂಟರ್: ಇಬ್ಬರು ಯೋಧರಿಗೆ ಗಾಯ

ಉತ್ತರ ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆ ಎನ್ ಕೌಂಟರ್ ನಡೆಸುತ್ತಿದ್ದು, ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ...

ಬಂಡಿಪೋರದಲ್ಲಿ ಎನ್'ಕೌಂಟರ್: ಇಬ್ಬರು ಯೋಧರಿಗೆ ಗಾಯ
ಬಂಡಿಪೋರದಲ್ಲಿ ಎನ್'ಕೌಂಟರ್: ಇಬ್ಬರು ಯೋಧರಿಗೆ ಗಾಯ
Published On :

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆ ಎನ್ ಕೌಂಟರ್ ನಡೆಸುತ್ತಿದ್ದು, ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಬಂಡಿಪೋರದ ಹಜಿನ್ ಪ್ರದೇಶದಲ್ಲಿರುವ ಪರ್ರೆ ಮೊಹಲ್ಲಾದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಕೂಡಲೇ ಸ್ಥಳದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಲು ಮುಂದಾಗಿತ್ತು. ಈ ವೇಳೆ ಉಗ್ರರು ಸೇನೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಯೋಧರಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.

ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.