ಶಶಿಕಲಾ ಕುರಿತ ಸುಪ್ರೀಂಕೋರ್ಟ್ ತೀರ್ಪು ನಿರೀಕ್ಷಿಸಿದ್ದೆ: ಸುಬ್ರಮಣಿಯನ್ ಸ್ವಾಮಿ

ವಿ.ಕೆ. ಶಶಿಕಲಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ತೀರ್ಪನ್ನು ನಿರೀಕ್ಷೆ ಮಾಡಿದ್ದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣಿಯನ್ ಸ್ವಾಮಿ...
ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣಿಯನ್ ಸ್ವಾಮಿ
ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ವಿ.ಕೆ. ಶಶಿಕಲಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ತೀರ್ಪನ್ನು ನಿರೀಕ್ಷೆ ಮಾಡಿದ್ದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.

ಇಡೀ ದೇಶವೇ ಕಾತರದಿಂದ ನಿರೀಕ್ಷಿಸುತ್ತಿದ್ದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ ನಟರಾಜನ್ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಹೊರಹಾಕಿದ್ದು, ಶಶಿಕಲಾ ಅವರನ್ನು ಅಪರಾಧಿ ಎಂದು ಘೋಷಿಸಿದೆ. ಅಲ್ಲದೆ, ಶಶಿಕಲಾಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸುಬ್ರಮಣಿಯನ್ ಸ್ವಾಮಿ ಅವರು, ನಾನು ದಾಖಲೆಗಳನ್ನು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಕೆ ಮಾಡಿದ ಬಳಿಕ ಪ್ರಕರಣ ವಿಚಾರಣೆಗೆ ಬಂದಿತ್ತು. ಪ್ರತೀ ಹಂತದಲ್ಲಿ ನಮಗೆ ಸಿಕ್ಕ ದಾಖಲೆಗಳೊಂದಿಗೆ ನಾವು ವಾದ ಮಂಡನೆ ಮಾಡಿದ್ದೆವು. ನಮಗೆ ಗೆಲವು ಸಿಗುತ್ತದೆ ಎಂದು ನಿರೀಕ್ಷಿಸಿದ್ದೆ. ಯಾವ ಆಧಾರದ ಮೂಲಕ ಆಕೆಯನ್ನು ಅಪರಾಧಿ ಎಂದು ಘೋಷಿಸಲಾಗಿದೆ ಎಂಬುದನ್ನು ಇದೀಗ ನೋಡಬೇಕಿದೆ. ಪ್ರಕರಣ ಬಗ್ಗೆ ಸಂಪೂರ್ಣ ಅರಿವು ನನಗಿದ್ದು, ಶಶಿಕಲಾ ಅಪರಾಧಿ ಎಂದು ಸುಪ್ರೀಂ ತೀರ್ಪು ನೀಡುತ್ತದೆ ಎಂದು ನಿರೀಕ್ಷಿಸಿದ್ದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com