ಸುಪ್ರೀಂ ತೀರ್ಪು ನ್ಯಾಯಕ್ಕೆ ಸಂದ ಜಯ: ಬಿವಿ ಆಚಾರ್ಯ
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ನಿಜಕ್ಕೂ ಹರ್ಷ ತಂದಿದೆ. ಅಪರಾಧಿ ಎಷ್ಟೇ ಪ್ರಭಾವಿಯಾಗಿದ್ದರೂ ಶಿಕ್ಷೆ ತಪ್ಪಿದ್ದಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಮತ್ತೆ ಸಾಬೀತು ಮಾಡಿದೆ ಎಂದು ನಿವೃತ್ತ ಸರ್ಕಾರಿಪರ ವಕೀಲ ಬಿವಿ ಆಚಾರ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೈಕೋರ್ಟ್ ನೀಡಿದ್ದ ತೀರ್ಪಿನ ಹೊರತಾಗಿಯೂ ಪ್ರಕರಣವನ್ನು ಸಂಪೂರ್ಣವಾಗಿ ಪರಿಶೀಲಿಸಿದ ಸುಪ್ರೀಂ ಕೋರ್ಟ್ ಅಪರಾಧಿಗಳಿಗೆ ಶಿಕ್ಷೆ ವಿಧಿಸಿದೆ. ಆ ಮೂಲಕ ಅಪರಾಧಿ ಎಷ್ಟೇ ಪ್ರಭಾವಿಯಾಗಿದ್ದರೂ ಆತನಿಗೆ ಶಿಕ್ಷೆ ತಪ್ಪಿದ್ದಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಮತ್ತೆ ಸಾಬೀತು ಮಾಡಿದೆ. ನಮ್ಮ ನ್ಯಾಯಾಂಗ ವ್ಯವಸ್ಥೆ ಎಷ್ಟು ಬಲವಾಗಿದೆ ಮತ್ತು ಸ್ವತಂತ್ರವಾಗಿದೆ ಎಂಬುದನ್ನು ಸುಪ್ರೀಂ ಕೋರ್ಟ್ ತನ್ನ ತೀರ್ಪಿನ ಮೂಲಕ ತೋರಿಸಿಕೊಟ್ಟಿದೆ ಎಂದು ಬಿವಿ ಆಚಾರ್ಯ ಹೇಳಿದ್ದಾರೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಕರ್ನಾಟಕ ಸರ್ಕಾರದ ಪರ ವಿಶೇಷ ಅಭಿಯೋಜಕರಾಗಿದ್ದ ಬಿವಿ ಆಚಾರ್ಯ ಅವರು, ಜಯಲಲಿತಾ ಮತ್ತು ಶಶಿಕಲಾ ವಿರುದ್ಧವಾಗಿ ವಾದ ಮಂಡಿಸಿದ್ದರು. ಅಲ್ಲದೆ ಹೈಕೋರ್ಟ್ ಜಯಾ ಪರ ತೀರ್ಪು ನೀಡಿದ್ದ ವೇಳೆ ತೀರ್ಪಿನ ಪರಿಶೀಲನೆ ನಡೆಸಿದ್ದ ಅವರು ತೀರ್ಪಿನಲ್ಲಿ ಲೋಪಗಳಿರುವ ಕುರಿತು ಪತ್ತೆ ಮಾಡಿದ್ದರು. ಅ ಮೂಲಕ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಬಿವಿ ಆಚಾರ್ಯ ಪ್ರಮುಖ ಕಾರಣರಾಗಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ