ಅಖಿಲೇಶ್ ಯಾದವ್ ರನ್ನು ಕಾಂಗ್ರೆಸ್ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Published On :
ಕನೌಜ್: ಉತ್ತರ ಪ್ರದೇಶದ ಕನೌಜ್ ಲೋಕಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಭಾಷಣವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಡಬಲ್ ಗೇಮ್ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಎಷ್ಟು ಬುದ್ಧಿವಂತಿಕೆಯಿಂದ ಕೆಲಸ ಮಾಡುತ್ತಿದೆ ಎಂಬುದು ಅಖಿಲೇಶ್ ಯಾದವ್ ಗೆ ಅರ್ಥವಾಗುವುದಿಲ್ಲ, ಆದರೆ ಮುಲಾಯಂ ಸಿಂಗ್ ಯಾದವ್ ಗೆ ಅರ್ಥವಾಗಲಿದೆ ಎಂದು ಮೋದಿ ಮಾರ್ಮಿಕವಾಗಿ ನುಡಿದಿದ್ದಾರೆ. ಮುಲಾಯಂ ಸಿಂಗ್ ಅವರ ಮಾತನ್ನು ಕೇಳಲು ಸಿದ್ಧರಿಲ್ಲದಿದ್ದರೂ ಎಚ್ಚೆತ್ತುಕೊಳ್ಳಿ, ಕಾಂಗ್ರೆಸ್ ಬಹುಜನ ಸಮಾಜವಾದಿ ಪಕ್ಷ (ಬಿಎಸ್ ಪಿ) ಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಮತ್ತೊಂದೆಡೆ ನಿಮ್ಮಿಂತ ಲಾಭ ಪಡೆಯುತ್ತಿದೆ ಎಂದು ಮೋದಿ ಎಚ್ಚರಿಸಿದ್ದಾರೆ.
ಇದೇ ವೇಳೆ ಗಂಭೀರ ಆರೋಪವೊಂದನ್ನು ಮಾಡಿರುವ ಪ್ರಧಾನಿ ನರೆಂದ್ರ ಮೋದಿ ಮುಲಾಯಂ ಸಿಂಗ್ ಯಾದವ್ ಹತ್ಯೆಗೆ ಸಂಚು ರೂಪಿಸಿದ್ದವರ ತೊಡೆಯ ಮೇಲೆಯೇ ಅಖಿಲೇಶ್ ಯಾದವ್ ಕುಳಿತಿದ್ದಾರೆ. ಇಂತಹ ಇಬ್ಬರು ದೊಡ್ಡ ಭ್ರಷ್ಟರು ಒಟ್ಟಾದರೆ ಉತ್ತರ ಪ್ರದೇಶದಲ್ಲಿ ಏನಾದರೂ ಉಳಿಯಲಿದೆಯೇ ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.
ಉತ್ತರ ಪ್ರದೇಶಕ್ಕೆ ಬಿಜೆಪಿಯೊಂದೇ ಆಶಾ ಕಿರಣ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಆಲೂಗಡ್ಡೆ, ಈರುಳ್ಳಿ, ಬೆಳ್ಳುಳ್ಳಿಯ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯ ವ್ಯಾಪ್ತಿಗೆ ತರುವುದಾಗಿ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


