ಹುತಾತ್ಮ ಯೋಧರಿಗೆ ಪ್ರಧಾನಿ, ಸೇನಾ ಮುಖ್ಯಸ್ಥರಿಂದ ಅಂತಿಮ ನಮನ

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಿನ್ನೆ ಉಗ್ರರು ನಡೆಸಿದ ಎರಡು ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ...
ಅಂತಿಮ ನಮನ ಸಲ್ಲಿಸುತ್ತಿರುವ ನರೇಂದ್ರ ಮೋದಿ
ಅಂತಿಮ ನಮನ ಸಲ್ಲಿಸುತ್ತಿರುವ ನರೇಂದ್ರ ಮೋದಿ
Updated on: 
ನವದೆಹಲಿ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಿನ್ನೆ ಉಗ್ರರು ನಡೆಸಿದ ಎರಡು ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಅಂತಿಮ ನಮನ ಸಲ್ಲಿಸಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಜತೆಗೆ ನಡೆದ ಎರಡು ಪ್ರತ್ಯೇಕ ಗುಂಡಿನ ಕಾಳಗದಲ್ಲಿ  ಓರ್ವ ಮೇಜರ್ ಸೇರಿ ನಾಲ್ವರು ಸೈನಿಕರು ಹುತಾತ್ಮರಾಗಿದ್ದರು. ಪ್ರತಿದಾಳಿ ನಡೆಸಿದ್ದ ಸೈನಿಕರು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದರು. 
ಇಂದು ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಹುತಾತ್ಮ ಯೋಧರ ಕಳೆಬರ ಆಗಮಿಸಿದ್ದ ವೇಳೆಯಲ್ಲಿ ಪ್ರಧಾನಿ ಹಾಗೂ ಸೇನಾ ಮುಖ್ಯಸ್ಥರು ಯೋಧರಿಗೆ ಅಂತಿಮ ಗೌರವ ಸಲ್ಲಿಸಿದರು. 
ಇದೇ ವೇಳೆ ಎನ್ ಕೌಂಟರ್ ಸಂದರ್ಭದಲ್ಲಿ ಸ್ಥಳೀಯರು ನೀಡಿದ ಸಹಕಾರಕ್ಕೆ ಸೇನಾ ಮುಖ್ಯಸ್ಥರಾದ ರಾವತ್ ಅವರು ಅಭಿನಂದನೆ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com