
ನವದೆಹಲಿ: ಏಕಕಾಲಕ್ಕೆ ಒಂದೇ ರಾಕೆಟ್ ನಲ್ಲಿ 104 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೊಂಡಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಸ್ರೋ ವಿಜ್ಞಾನಿಗಳ ಸಾಧನೆಗೆ ಮೊದಲು ಶುಭಾಶಯ ತಿಳಿಸುತ್ತೇನೆ. ಇಡೀ ದೇಶವೇ ಹೆಮ್ಮೆ ಪಡುವಂತಹ ಕ್ಷಣ ಇದು. ಪಿಎಸ್ ಎಲ್ ವಿ ಸಿ37 ಮೂಲಕ ಕಾರ್ಟೋಸ್ಯಾಟ್ -2 ಉಡಾವಣೆ ಮಾಡುವ ಮೂಲಕ ಇಸ್ರೋ ಮಹತ್ವದ ಮೈಲುಗಲ್ಲು ಸಾಧಿಸಿದೆ. ಇಡೀ ದೇಶದ ಇಸ್ರೋ ವಿಜ್ಞಾನಿಗಳಿಗೆ ಸೆಲ್ಯೂಟ್ ಹೊಡೆಯುತ್ತದೆ. ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯೊಂದಿಗೆ ಮಾತನಾಡಿ ವಿಜ್ಞಾನಿಗಳ ಅಸಾಧಾರಣ ಸಾಧನೆ ಸಂಬಂಧ ಅಭಿನಂದಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
Advertisement