ಗುಜರಾತ್ ಶ್ರೀಕೃಷ್ಣನ ಕರ್ಮ ಭೂಮಿಯಾದರೆ, ಉತ್ತರ ಪ್ರದೇಶ ನನ್ನ ಕರ್ಮಭೂಮಿ: ಮೋದಿ

ಚುನಾವಣೆ ಹಿನ್ನೆಲೆಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ತಾವು ಶ್ರೀಕೃಷ್ಣನ ಮಾದರಿಯಲ್ಲಿ ಜನ್ಮ ಭೂಮಿಯ ಹೊರತಾದ ಕರ್ಮಭೂಮಿಯನ್ನು ಆರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ನರೆಂದ್ರ ಮೋದಿ
ನರೆಂದ್ರ ಮೋದಿ
ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ತಾವು ಕರ್ಮ ಭೂಮಿಯ ವಿಚಾರದಲ್ಲಿ ಶ್ರೀಕೃಷ್ಣನನ್ನು ಅನುಸರಿಸುತ್ತಿರುವುದಾಗಿ ಹೇಳಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ತಾವು ಶ್ರೀಕೃಷ್ಣನ ಮಾದರಿಯಲ್ಲಿ ಜನ್ಮ ಭೂಮಿಯ ಹೊರತಾದ ಕರ್ಮಭೂಮಿಯನ್ನು ಆರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. 
ಉತ್ತರ ಪ್ರದೇಶದಲ್ಲಿ ಜನಿಸಿದ ಶ್ರೀಕೃಷ್ಣ ಇಂದಿನ ಗುಜರಾತ್ ನ್ನು ತನ್ನ ಕರ್ಮಭೂಮಿಯನ್ನಾಗಿಸಿಕೊಂಡ, ಅಂತೆಯೇ ಗುಜರಾತ್ ನಲ್ಲಿ ಜನ್ಮಿಸಿದ ನಾನು ಉತ್ತರ ಪ್ರದೇಶವನ್ನು ಕರ್ಮಭೂಮಿಯನ್ನಾಗಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ತಮ್ಮನ್ನು ಉತ್ತರ ಪ್ರದೇಶದ ದತ್ತು ಪುತ್ರ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನತೆಯ ವಿಶ್ವಾಸಕ್ಕೆ ಮೋಸ ಮಾಡುವುದಿಲ್ಲ ಎಂಬ ಭರವಸೆ ನೀಡಿದ್ದಾರೆ. 
ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್, ಎಸ್ ಪಿ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ವಿರುದ್ಧವೂ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಅಖಿಲೇಶ್ ಯಾದವ್, ಮುಲಾಯಂ ಸಿಂಗ್ ಯಾದವ್ ಜನ್ಮ ಭೂಮಿಯನ್ನೇ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತಾಯ್ನಾಡಿಗೆ ಮೋಸ ಮಾಡುವ ಮಗ ನಾನಲ್ಲ, ನಾನು ದತ್ತು ಪುತ್ರನಾಗಿದ್ದರೂ ಉತ್ತರ ಪ್ರದೇಶದ ಬಗ್ಗೆ ಕಾಳಜಿ ಹೊಂದಿದ್ದೇನೆ ಎಂದು ಮೋದಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com