ಪ್ರಶ್ನೆಗಳನ್ನು ಎದುರಿಸಲಾಗದೆ ಪ್ರಿಯಾಂಕಾ ಅಮೇಥಿ ಪ್ರಚಾರದಲ್ಲಿ ಪಾಲ್ಗೊಳ್ಳಲ್ಲ: ಸ್ಮೃತಿ ಇರಾನಿ

ಕ್ಷೇತ್ರದ ಜನತೆಯ ಪ್ರಶ್ನೆಗಳಿಗೆ ಉತ್ತರಿಸಲು ಪ್ರಿಯಾಂಕಾ ಗಾಂಧಿಗೆ ಸಾದ್ಯವಿಲ್ಲ, ಹೀಗಾಗಿ ಅವರು ಅಮೇಥಿಯ ಚುನಾವಣಾ ಪ್ರಚಾರದಲ್ಲಿ ಪಾಲ್ಗೋಳ್ಳುವುದಿಲ್ಲ ...
ಸ್ಮೃತಿ ಇರಾನಿ ಮತ್ತು ಪ್ರಿಯಾಂಕಾ ಗಾಂಧಿ
ಸ್ಮೃತಿ ಇರಾನಿ ಮತ್ತು ಪ್ರಿಯಾಂಕಾ ಗಾಂಧಿ
Updated on: 

ಕಾನ್ಪುರ: ಕ್ಷೇತ್ರದ ಜನತೆಯ ಪ್ರಶ್ನೆಗಳಿಗೆ ಉತ್ತರಿಸಲು ಪ್ರಿಯಾಂಕಾ ಗಾಂಧಿಗೆ ಸಾದ್ಯವಿಲ್ಲ, ಹೀಗಾಗಿ ಅವರು ಅಮೇಥಿಯ ಚುನಾವಣಾ ಪ್ರಚಾರದಲ್ಲಿ ಪಾಲ್ಗೋಳ್ಳುವುದಿಲ್ಲ ಎಂದು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ನಿನ್ನೆ ಕಾನ್ಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ, ಉತ್ತರ ಪ್ರದೇಶದಲ್ಲಿ ಸರ್ಕಾರ ರಚಿಸಲು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ಕಾತರದಿಂದ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಒಂದು ವೇಳೆ ಪಕ್ಷ ಅಧಿಕಾರಕ್ಕೆ ಬಂದರೇ ನೀವು ಮುಖ್ಯಮಂತ್ರಿ ಅಭ್ಯರ್ಥಿಯಾಗುತ್ತೀರಾ ಎಂದು ಕೇಳಿದ ಪ್ರಶ್ನೆಗೆ ನೇರವಾಗಿ ಉತ್ತರಿಸದ ಸ್ಮೃತಿ ಇರಾನಿ, 2014ರ ಲೋಕಸಭೆ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ನಾನು ಅಂದಿನಿಂದಲೂ ಅಮೇಥಿ ಜನರ ಪರವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಆದರೆ ಪ್ರಿಯಾಂಕಾ ಗಾಂಧಿ ಬಂದು ಇಲ್ಲಿ ಪ್ರಚಾರ ಮಾಡಲು ಅವರಿಗೆ ನೈತಿಕತೆ ಇಲ್ಲ, ಯಾಕೆಂದರೇ ಅವರು ಜನರಿಗೆ ಕೊಟ್ಟ ಭರವಸೆಗಳನ್ನು ಈಡರಿಸಲಿಲ್ಲ, ಹೀಗಾಗಿ ಜನರ ಪ್ರಶ್ನೆಗಳಿಗೆ ಉತ್ತರ ನೀಡಿಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com