ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ನ್ನು ನಿಲ್ಲಿಸಿ ಜನತೆಯ ಮಾತನ್ನು ಕೇಳಬೇಕೆಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ನೋಟು ನಿಷೇಧದಿಂದ ಜನರು ಎದುರಿಸುತ್ತಿರುವ ಸಂಕಷ್ಟವನ್ನು ಪ್ರಧಾನಿ ನರೇಂದ್ರ ಮೋದಿ ಆಲಿಸಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಉತ್ತರ ಪ್ರದೇಶದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿರುವ ರಾಹುಲ್ ಗಾಂಧಿ, ರೈತರ ಸಾಲ ಮನ್ನ ಮಾಡದೇ ಇರುವುದಕ್ಕೆ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
"ನಿನ್ನೆ ನಡೆದ ಸಭೆಯಲ್ಲಿ ಒಂದಷ್ಟು ಜನರು ನೋಟು ನಿಷೇಧದ ಬಗ್ಗೆ ಧ್ವನಿ ಎತ್ತಿದ್ದರು. ಅವರ ಸಮಸ್ಯೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಂದಾದರೂ ಕೇಳಿದ್ದಾರಾ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ನಿಲ್ಲಿಸಿ ಜನರ ಸಮಸ್ಯೆಗಳನ್ನು ಆಲಿಸಬೇಕೆಂದು ರಾಹುಲ್ ಗಾಂಧಿ ಹೇಳಿದ್ದಾರೆ.
ರೈತರ ಸಾಲ ಮನ್ನಾ ಮಾಡಲು ನಿಮಗೆ ಉತ್ತರ ಪ್ರದೇಶದಲ್ಲಿ ಅಧಿಕಾರ ಬೇಕಿಲ್ಲ. ಕೇಂದ್ರದಲ್ಲಿ ನಿಮ್ಮ ಸರ್ಕಾರವೇ ಅಧಿಕಾರದಲ್ಲಿದೆ, ಈಗಲೇ ರೈತರ ಸಾಲ ಮನ್ನಾ ಮಾಡಿ ಎಂದು ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.