ದೆಹಲಿ: ಬಿಸಿ ಊಟದಲ್ಲಿ ಸತ್ತ ಇಲಿ ಪತ್ತೆ- ಅಸ್ವಸ್ಥ ಮಕ್ಕಳು ಆಸ್ಪತ್ರೆಗೆ ದಾಖಲು

ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೀಡಿದ್ದ ಮಧ್ಯಾಹ್ನದ ಬಿಸಿ ಊಟದಲ್ಲಿ ಸತ್ತ ಇಲಿ ಬಿದ್ದಿದ್ದ ಪರಿಣಾಮ ಊಟ ಸೇವಿಸಿದ್ದ ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ಗುರುವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೀಡಿದ್ದ ಮಧ್ಯಾಹ್ನದ ಬಿಸಿ ಊಟದಲ್ಲಿ ಸತ್ತ ಇಲಿ ಬಿದ್ದಿದ್ದ ಪರಿಣಾಮ ಊಟ ಸೇವಿಸಿದ್ದ ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ಗುರುವಾರ ನಡೆದಿದೆ.

ದೆಹಲಿಯಲ್ಲಿ ಡಿಯೋಲಿ ಪ್ರದೇಶದಲ್ಲಿರುವ ಸರ್ಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ನಿನ್ನೆ ಮಧ್ಯಾಹ್ನ ಬಿಸಿ ಊಟ ನೀಡಲಾಗಿತ್ತು. ಊಟ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಕೆಲ ಬಾಲಕರು ಹೊಟ್ಟೆ, ತಲೆ ನೋವು ಎಂದು ಹೇಳಲು ಆರಂಭಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ಮಕ್ಕಳನ್ನು ದಾಖಲಿಸಲಾಗಿದೆ.

ಪ್ರಕರಣ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು, ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ಇಲಿ ಪತ್ತೆಯಾಗಿತ್ತು. ಅಸ್ವಸ್ಥಗೊಂಡ 9 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರೊಂದಿಗೆ ಮಾತುಕತೆ ನಡೆಸಿದ್ದೇನೆ. ಮಕ್ಕಳು ಚೇತರಿಕೆಗೊಳ್ಳುತ್ತಿದ್ದಾರೆಂದು ಹೇಳಿದ್ದಾರೆಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ಅಧಿಕಾರಿಗಳು ಶಾಲಾ ಆಡಳಿತ ಮಂಡಳಿಯ ವಿರುದ್ದ ಎಫ್ಐಆರ್ ದಾಖಲಿಸಿಕೊಂಡಿದ್ದು, ಅಡುಗೆ ಮಾಡಿದ್ದ ಸಿಬ್ಬಂದಿಗಳ ವಿಚಾರಣೆಗೊಳಪಡಿಸಲಾಗಿದೆ. ಮಕ್ಕಳ ಆರೋಗ್ಯದ ವಿಚಾರದಲ್ಲಿ ಇಂತಹ ಬೇಜಾವಾಬ್ದಾರಿತನದ ನಡೆಯನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com