ಇಂದು ರಾಜ್ಯದಲ್ಲಿ ಮೊದಲ ಬಾರಿಗೆ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಉತ್ತರಪ್ರದೇಶ ನನ್ನನ್ನು ದತ್ತು ಪುತ್ರನನ್ನಾಗಿ ಸ್ವೀಕರಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ ಉತ್ತರ ಪ್ರದೇಶದ ಅಭಿವೃದ್ಧಿಗೆ ಹೊರಗಿನವರನ್ನು ದತ್ತು ತೆಗೆದುಕೊಳ್ಳುವ ಅಗತ್ಯ ಇಲ್ಲ. ಅದಕ್ಕಾಗಿ ರಾಜ್ಯದವರೇ ಆದ ಅಖಿಲೇಶ್ ಯಾದವ್ ಹಾಗೂ ರಾಹುಲ್ ಗಾಂಧಿ ಇದ್ದಾರೆ ಎಂದರು.