ಕಾಶ್ಮಿರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮಾದರಿ ಧ್ವಂಸಗೊಳಿಸಿದ ಪೊಲೀಸರು

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮಾದರಿಯನ್ನು ಧ್ವಂಸಗೊಳಿಸಿ ಓರ್ವ ಉಗ್ರ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿರುವುದಾಗಿ ಶನಿವಾರ ಕಾಶ್ಮೀರ ಪೊಲೀಸರು ಹೇಳಿಕೊಂಡಿದ್ದಾರೆ.
ಬಂಧಿತ ಉಗ್ರನನ್ನು ಬಾರಾಮುಲ್ಲಾ ಜಿಲ್ಲೆಯ ಸೋಪೊರ್ ನ ಸೀಲು ಗ್ರಾಮದ ಇರ್ಷಾದ್ ಅಹ್ಮದ್ ಶಾಹ್ ಎಂದು ಗುರುತಿಸಲಾಗಿದ್ದು, ಯುವಕರು ಮತ್ತು ಮುಗ್ದರ ಮೇಲೆ ಪ್ರಭಾವ ಬೀರುತ್ತಿದ್ದ ಇತರೆ 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ಉಗ್ರ ಚಟುವಟಿಕೆಗಳನ್ನು ವಿಸ್ತರಿಸುತ್ತಿದ್ದರು ಮತ್ತು ಬಾರಾಮುಲ್ಲಾ ಹಾಗೂ ಸೋಪೋರೆಯಲ್ಲಿ ಸ್ಥಳೀಯ ಯುವಕರನ್ನು ಸಂಘಟನೆಗೆ ನೇಮಕ ಮಾಡಿಕೊಳ್ಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಶಾಹ್ ಅಲಿಯಾಸ್ ತನ್ವೀರ್ ಹಾಗೂ ತಪ್ಪಿಸಿಕೊಂಡಿರುವ ಇತರೆ ಇಬ್ಬರು ಯುವಕರು ಬೆಹ್ರಾಂಪೊರಾದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Policeಪೊಲೀಸ್ಜಮ್ಮು ಮತ್ತು ಕಾಶ್ಮೀರJammu and Kashmirbust Hizbul Mujahideen terror moduleಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮಾದರಿ ಧ್ವಂಸ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


