ಅಗ್ನಿ ದುರಂತ
ದೇಶ
ಮಹಾರಾಷ್ಟ್ರದ ಗೋದಾಮಿನಲ್ಲಿ ಅಗ್ನಿ ಅವಘಡ: ನಾಲ್ವರು ಸಜೀವ ದಹನ
ಮಹಾರಾಷ್ಟ್ರದ ಭೀವಂಡಿಯಲ್ಲಿರುವ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ನಾಲ್ವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ...
ಭೀವಂಡಿ(ಮಹಾರಾಷ್ಟ್ರ): ಮಹಾರಾಷ್ಟ್ರದ ಭೀವಂಡಿಯಲ್ಲಿರುವ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ನಾಲ್ವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.
ಶಾರ್ಟ್ ಸಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಗ್ನಿ ದುರಂತದಲ್ಲಿ ನಾಲ್ವರು ಸಜೀವ ದಹನವಾಗಿದ್ದು ಇಬ್ಬರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

