
ಲಖನೌ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಲಿದ್ದು, ಸರ್ಕಾರ ರಚನೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.
ಉತ್ತರಪ್ರದೇಶ ವಿಧಾನಸಭಾ ಚುನಾವಣೆ 7 ಹಂತದ ಪೈಕಿ 3ನೇ ಹಂತದ ಮತದಾನ ಆರಂಭಗೊಂಡಿದ್ದು, ಲಖನೌನಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದ ಬಳಿಕ ಮಾತನಾಡಿರುವ ಅವರು, ಸ್ಪಷ್ಟ ಬಹುಮತ ಅಲ್ಲ ಸಂಪೂರ್ಣ ಬಹುಮತದ ಮೂಲಕ ಬಿಜೆಪಿ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬರಲಿದೆ. ಈಗಾಗಲೇ ಉತ್ತರಪ್ರದೇಶದಲ್ಲಿ 2 ಹಂತದಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪ್ರಸ್ತುತ ಇರುವ ಸನ್ನಿವೇಶಗಳನ್ನು ಗಮನಿಸಿದರೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದ್ದಾರೆ.
ರಾಜ್ಯದಲ್ಲಿರುವ ಪ್ರತೀಯೊಬ್ಬ ಮತದಾರರು ಮತದಾನ ಮಾಡುವಂತೆ ಈ ಮೂಲಕ ಮನವಿ ಮಾಡಿಕೊಳ್ಳುದ್ದಿದ್ದೇನೆ. ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಪ್ರತೀಯೊಬ್ಬ ಮತದಾರರು ಈ ಹಬ್ಬದಲ್ಲಿ ಭಾಗಿಯಾಗಬೇಕಿದೆ. ಮಾರ್ಚ್ 11ಕ್ಕೆ ಎಲ್ಲವೂ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.
Advertisement