ಪಳನಿಸ್ವಾಮಿ ವಿಶ್ವಾಸಮತಕ್ಕೆ ವಿರೋಧ: ಮದ್ರಾಸ್ 'ಹೈ' ಮೆಟ್ಟಿಲೇರಿದ ಡಿಎಂಕೆ

ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ಅವರ ವಿಶ್ವಾಸಮತಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಡಿಎಂಕೆ ಪಕ್ಷದ ನಾಯಕರು ಸೋಮವಾರ ಮದ್ರಾಸ್ ಹೈಕೋರ್ಟ್...
ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ
ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ
Updated on: 

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ಅವರ ವಿಶ್ವಾಸಮತಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಡಿಎಂಕೆ ಪಕ್ಷದ ನಾಯಕರು ಸೋಮವಾರ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
 
ತಮಿಳುನಾಡಿನ ವಿಧಾನಸಭೆಯಲ್ಲಿ ನಡೆಸಲಾದ ವಿಶೇಷ ಅಧಿವೇಶನದ ವೇಳೆ ಸಾಕಷ್ಟು ವಿರೋಧಗಳ ನಡೆವೆಯು ಪಳನಿಸ್ವಾಮಿಯವರು ವಿಶ್ವಾಸಮತಯಾಚನೆ ಮಾಡಿ ಯಶಸ್ವಿಯಾಗಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಮತ್ತು ಡಿಎಂಕೆ ಮುಖಂಡ ಸ್ಟಾಲಿನ್ ಅವರು ವಿಶ್ವಾಸಮತವನ್ನು ರದ್ದುಗೊಳಿಸುವಂತೆ ಕೋರಿ ನಿನ್ನೆಯಷ್ಟೇ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಇದೀಗ ಡಿಎಂಕೆ ಪಕ್ಷದ ನಾಯಕರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದು, ವಿಶ್ವಾಸಮತವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಲಯವು ನಾಳೆ ವಿಚಾರಣೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಅನುಸರಿಸಿದ ಕ್ರಮ ನಿಯಮ ಬಾಹಿರವಾದುದು ಎಂದು ದೂರಿದ್ದ ಡಿಎಂಕೆ ಮುಖಂಡ ಸ್ಟಾಲಿನ್ ಅವರು ನಿನ್ನೆಯಷ್ಟೇ ಪಕ್ಷದ ಶಾಸಕರನ್ನು ಕರೆದು ವಿಶೇಷ ಸಭೆಯನ್ನು ನಡೆಸಿದ್ದರು. ಸಭೆಯಲ್ಲಿ ಫೆ.22 ರಂದು ರಾಜ್ಯದಾದ್ಯಂತ ಉಪವಾಸ ಸತ್ಯಾಗ್ರಹ ನಡೆಸಲು ಕರೆ ನೀಡಿದ್ದಾರು. ಸಭೆ ಬಳಿಕ ಪ್ರತಿಕ್ರಿಯೆ ನೀಡಿದ್ದ ಅವರು, ತಿರುಚಿಯಲ್ಲಿ ನಡೆಯುವ ಉಪವಾಸ ಸತ್ಯಾಗ್ರಹದಲ್ಲಿ ನಾನೂ ಕೂಡ ಭಾಗಿಯಾಗುತ್ತಿದ್ದೇನೆ. ವಿಶ್ವಾಸಮತ ಸಂಬಂಧ ಪಕ್ಷದ ಶಾಸಕರು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಲು ಯತ್ನ ನಡೆಸುತ್ತಿದ್ದಾರೆ. ಭೇಟಿಯಾದ ನಂತರ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಣೆ ನೀಡುತ್ತೇವೆಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com