ಲಾಲು ಪ್ರಸಾದ್ ಯಾದವ್
ಲಾಲು ಪ್ರಸಾದ್ ಯಾದವ್

ಸಮಾಜವಾದಿ ಪಕ್ಷ-ಕಾಂಗ್ರೆಸ್ ಮೈತ್ರಿ ಪರ ಲಾಲು ಪ್ರಸಾದ್ ಪ್ರಚಾರ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಹಾರದ ಆರ್ ಜೆಡಿ ಪಕ್ಷದ ಮುಖಂಡ ಲಾಲು ಪ್ರಸಾದ್ ಯಾದವ್ ಸಮಾಜವಾದಿ ಪಕ್ಷ-ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಲಿದ್ದಾರೆ.
ಪಾಟ್ನಾ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಹಾರದ ಆರ್ ಜೆಡಿ ಪಕ್ಷದ ಮುಖಂಡ ಲಾಲು ಪ್ರಸಾದ್ ಯಾದವ್ ಸಮಾಜವಾದಿ ಪಕ್ಷ-ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಲಿದ್ದಾರೆ. 
ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲು ಪ್ರಸಾದ್ ಈಗಾಗಲೇ ಲಖನೌ ಗೆ ತೆರಳಿದ್ದಾರೆ. ಫೆ.21-22 ರಂದು ಲಾಲು ಪ್ರಸಾದ್ ಯಾದವ್ ಕಾಂಗ್ರೆಸ್- ಎಸ್ ಪಿ ಪರ ಪ್ರಚಾರ ನಡೆಸಲಿದ್ದಾರೆ. ಬಿಹಾರ-ಉತ್ತರ ಪ್ರದೇಶ ಗಡಿ ಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. 
ಎಸ್ ಪಿ-ಕಾಂಗ್ರೆಸ್ ಮೈತ್ರಿ ಬಿಜೆಪಿಯನ್ನು ಸೋಲಿಸಲಿದೆ ಎಂದು ಲಾಲು ಪ್ರಸಾದ್ ಯಾದವ್ ಹಲವು ಬಾರಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಮೋದಿ ಅಲೆ ಇಲ್ಲ ಎಂಬುದು ಈಗಾಗಲೇ ಬಿಜೆಪಿಗೆ ಅರ್ಥವಾಗಿದೆ. ಪಂಜಾಬ್ ಉತ್ತರಾಖಂಡ್ ನಲ್ಲೂ ಬಿಜೆಪಿ ಸೋಲು ಕಾಣಲಿದೆ ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com