ನಾಗಾಲ್ಯಾಂಡ್: ಫೆ.20 ರಂದು ಹೊಸ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

ನಾಗಾಲ್ಯಾಂಡ್ ನ ಮುಖ್ಯಮಂತ್ರಿ ಟಿ.ಆರ್. ಝೆಲಿಯಂಗ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಫೆ.20 ರಂದು ಡಿಎಎನ್ ಸಮ್ಮಿಶ್ರ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಯ ಆಯ್ಕೆ ನಡೆಯುವ ಸಾಧ್ಯತೆ ಇದೆ.
.ಆರ್ ಝೆಲಿಯಂಗ್
.ಆರ್ ಝೆಲಿಯಂಗ್
ಕೊಹಿಮಾ: ನಾಗಾಲ್ಯಾಂಡ್ ನ ಮುಖ್ಯಮಂತ್ರಿ  ಟಿ.ಆರ್. ಝೆಲಿಯಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಫೆ.20 ರಂದು ಡೆಮಾಕ್ರೆಟಿಕ್ ಅಲಯನ್ಸ್ ಆಫ್ ನಾಗಾಲ್ಯಾಂಡ್(ಡಿಎಎನ್) ಸಮ್ಮಿಶ್ರ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಯ ಆಯ್ಕೆ ನಡೆಯುವ ಸಾಧ್ಯತೆ ಇದೆ. 
ಫೆ.19 ರಂದು ಟಿ.ಆರ್ ಝೆಲಿಯಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಲೋಕಸಭಾ ಸದಸ್ಯ ನೈಪಿ ರಿಯೊ ಅವರು ನಾಗಾಲ್ಯಾಂಡ್ ನ ನೂತನ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಝೆಲಿಯಂಗ್ ಫೆ.20 ರಂದು ನಾಗಾ ಪೀಪಲ್ಸ್ ಫ್ರಂಟ್ (ಎನ್ ಪಿಎಫ್) ಶಾಸಕರ ತುರ್ತು ಸಭೆ ಕರೆದಿದ್ದು, ಸಭೆಯಲ್ಲಿ ಹೊಸ ಮುಖ್ಯಮಂತ್ರಿ ಯಾರು ಎಂಬುದನ್ನು ಘೋಷಿಸುವ ಸಾಧ್ಯತೆ ಇದೆ. 
ಮುಖ್ಯಮಂತ್ರಿ ಹುದ್ದೆಗೆ ನೈಪಿ ರಿಯೊ ಅವರ ಹೆಸರು ಕೇಳಿಬರುತ್ತಿದೆ ಆದರೂ ಸಹ ಸಿಎಂ ಯಾರಾಗಲಿದ್ದಾರೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಶಾಸಕರ ತುರ್ತು ಸಭೆ ನಂತರ ನೂತನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com