ಛತ್ತೀಸ್ಗಡ: ಕ್ಷಿಪ್ರ ಕಾರ್ಯಾಚರಣೆಯಲ್ಲಿ 7 ನಕ್ಸಲರನ್ನು ಹತ್ಯೆಗೈದ ಸೇನೆ

ಛತ್ತೀಸ್ಗಡದ ನಕ್ಸಲ್ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, 7 ನಕ್ಸಲರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಯ್ಪುರ: ಛತ್ತೀಸ್ಗಡದ ನಕ್ಸಲ್ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, 7 ನಕ್ಸಲರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಛೊಟ್ಟೆದೊಂಗಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿರುವ ಕಲಾಂ ಗ್ರಾದ ಅರಣ್ಯ ಪ್ರದೇಶದಲ್ಲಿ ನಕ್ಸಲರಿರುವುದಾಗಿ ಮಾಹಿತಿ ತಿಳಿದುಬಂದಿತ್ತು. ಈ ವೇಳೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಮುಂದಾಗಿತ್ತು. ಈ ವೇಳೆ ನಕ್ಸಲರು ಹಾಗೂ ಭದ್ರತಾ ಪಡೆ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಮೂವರು ಮಹಿಳೆಯರು ಸೇರಿದಂತೆ ಒಟ್ಟು 7 ಮಂದಿ ನಕ್ಸಲರನ್ನು ಸೇನಾ ಪಡೆ ಹತ್ಯೆ ಮಾಡಿದೆ ಎಂದು ಸುಂದರ್ ರಾಜ್. ಪಿ ಅವರು ಹೇಳಿದ್ದಾರೆ.

ಕಾರ್ಯಾಚರಣೆ ವೇಳೆ ಇನ್ನೂ ಕೆಲ ನಕ್ಸಲರು ಪರಾರಿಯಾಗಿದ್ದು, ಸೇನಾ ಪಡೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ. ಎನ್ ಕೌಂಟರ್ ಪ್ರದೇಶದಲ್ಲಿ 7 ನಕ್ಸಲರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಸಾಕಷ್ಟು ಪ್ರಮಾಣದ ಸ್ಫೋಟಕ ವಸ್ತುಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com