ಮತದಾರರಿಗೆ ಬಹಿರಂಗ ಪತ್ರ ಬರೆದ ಸೋನಿಯಾ, ಮೋದಿ ವಿರುದ್ಧ ವಾಗ್ದಾಳಿ

ಉತ್ತರ ಪ್ರದೇಶದ ನಾಲ್ಕನೆ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ರಾಯ್ ಬರೆಲಿ....
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
ನವದೆಹಲಿ: ಉತ್ತರ ಪ್ರದೇಶದ ನಾಲ್ಕನೆ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ರಾಯ್ ಬರೆಲಿ ಹಾಗೂ ಅಮೆಥಿ ಮತದಾರರಿಗೆ ಬಹಿರಂಗ ಪತ್ರ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಎರಡೂ ಕ್ಷೇತ್ರಗಳ ಮತದಾರರನ್ನು ಉದ್ದೇಶಿಸಿ ಇಂದು ಬಹಿರಂಗ ಪತ್ರ ಬರೆದಿರುವ ಸೋನಿಯಾ, ಕೆಲವು ವೈಯಕ್ತಿಕ ಕಾರಣಗಳಿಂದ ತಾವು ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದು, ರಾಯ್ ಬರೆಲಿ ಮತ್ತು ಅಮೆಥಿ ನಮ್ಮ ಜೀವನದ ಅವಿಭಾಜ್ಯ ಅಂಗಗಳಾಗಿವೆ ಎಂದು ಹೇಳಿದ್ದಾರೆ.
ಇದೇ ವೇಳೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕಿ, ಕೇಂದ್ರ ಸರ್ಕಾರ ಕಲ್ಯಾಣ ಯೋಜನೆಗಳಿಂದ ನಿಮ್ಮನ್ನು ವಂಚಿತರನ್ನಾಗಿ ಮಾಡುತ್ತಿದ್ದು, ಈ ವಿಚಾರ ತಮಗೆ ತುಂಬಾ ನೋವು ತಂದಿದೆ ಎಂದಿದ್ದಾರೆ.
ಕಾಂಗ್ರೆಸ್ ಗೆ ಮತ ಹಾಕಿ. ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ನೀಡಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಆದರೆ ತಮ್ಮ ಪತ್ರದಲ್ಲಿ ಉತ್ತರ ಪ್ರದೇಶದ ಆಡಳಿತರೂಢ ಸಮಾಜವಾದಿ ಪಕ್ಷದೊಂದಿಗಿನ ಕಾಂಗ್ರೆಸ್ ಮೈತ್ರಿಯನ್ನು ಎಲ್ಲೂ ಪ್ರಸ್ತಾಪಿಸಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com