ನವದೆಹಲಿ: ಲಂಚಕ್ಕೆ ಪಡೆದ ಆರೋಪದ ಮೇಲೆ ದೆಹಲಿಯ ಎಎಸ್ಐ ಮತ್ತು ಪೇದೆಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ದೆಹಲಿಯ ನರೆಲಾ ಎಂಬಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ದೆಹಲಿ ಪೊಲೀಸರು ಒಂದೂವರೆ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ಮೊದಲು ಕಂತಿನಲ್ಲಿ 50 ಸಾವಿರ ರುಪಾಯಿ ಪಡೆಯುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರ ವಿರುದ್ಧ ಸೆಕ್ಷನ್ 120-ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.