ಅಂಗಡಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದ ಪರಿಣಾಮ ಅಗ್ನಿಶಾಮಕದ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಅಂಗಡಿಯೊಳಗಿದ್ದ ಎಲ್'ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಗ್ನಿಶಾಮಕದ ದಳದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.