
ನವದೆಹಲಿ: ಅಮೆರಿಕದ ಕಾನ್ಸಾಸ್ ನಲ್ಲಿ ಭಾರತೀಯ ವ್ಯಕ್ತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಸಂತಾಪ ಸೂಚಿಸಿರುವ ವಿದೇಶ ಸಚಿವೆ ಸುಷ್ಮಾ ಸ್ವರಾಜ್ ಅವರು ಪ್ರಕರಣ ಸಾಕಷ್ಟು ಆಘಾತವನ್ನು ತಂದಿದೆ ಎಂದು ಶುಕ್ರವಾರ ಹೇಳಿದ್ದಾರೆ.
ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತೀಯನ ಹತ್ಯೆ ಪ್ರಕರಣ ಆಘಾತನವನ್ನು ತಂದಿದೆ. ಪ್ರಕರಣ ಸಂಬಂಧ ಶ್ರೀನಿವಾಸ್ ಅವರ ಕುಟುಂಬಸ್ಥರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಾಯವನ್ನು ಕೇಂದ್ರ ಮಾಡಲಿದೆ ಎಂದು ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಸಂಪರ್ಕ ಮಾಡಿ ಮಾತುಕತೆ ನಡೆಸಿದ್ದೇನೆ. ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಭಾರತೀಯ ಅಲೋಕ್ ಮದಸಾನಿ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆಂದು ಸುಷ್ಮಾ ಸ್ವರಾಜ್ ಅವರು ತಿಳಿಸಿದ್ದಾರೆ.
ಕನ್ಸಾಸ್ ನ ಒಲಾತೆ ಎಂಬಲ್ಲಿ ಬಾರೊಂದರಲ್ಲಿ ಭಾರತೀಯ ಮೇಲೆ ದಾಳಿ ನಡೆಸಲಾಗಿತ್ತು. 'ನಮ್ಮ ದೇಶವನ್ನು ಬಿಟ್ಟು ತೊಲಗಿ' ಎಂದು ಕೂಗಿರುವ ದುಷ್ಕರ್ಮಿಯೊಬ್ಬ ಇದ್ದಕ್ಕಿದ್ದಂತೆ ಹೈದರಾಬಾದ್ ಮೂಲದ ಇಂಜಿನಿಯರ್ ಶ್ರೀನಿವಾಸ್ ಕುಂಚುಬೊಟ್ಲ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ.
Advertisement