ಮೋದಿ ವಿರುದ್ಧ ಹೇಳಿಕೆ: ದಿಗ್ವಿಜಯ್ ಸಿಂಗ್ ಅಮಾನತಿಗೆ ಬಿಜೆಪಿ ಆಗ್ರಹ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಬೇಕೆಂದು...
ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್
ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಶನಿವಾರ ಆಗ್ರಹಿಸಿದೆ. 
ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಸಿದ್ಧಾರ್ಥ್ ನಾಥ್ ಸಿಂಗ್ ಅವರು, ದಿಗ್ವಿಜಯ್ ಸಿಂಗ್ ಅವರ ಹೇಳಿಕೆಯನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ. ಮಹಾತ್ಮ ಗಾಂಧಿ ಮತ್ತು ಜವಾಹರ್ ಲಾಲ್ ನೆಹರೂ ಅಂತಹ ಮಹಾನ್ ವ್ಯಕ್ತಿಗಳು ಹೆಮ್ಮೆಪಟ್ಟಂತಹ ಪಕ್ಷದಲ್ಲಿ ಇಂತಹ ನಾಯಕರಿರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ. 
ಗೌರವಯುತ ಸ್ಥಾನದಲ್ಲಿರುವ ದೇಶದ ಪ್ರಧಾನಮಂತ್ರಿಗಳ ಬಗ್ಗೆ ದಿಗ್ವಿಜಯ್ ಸಿಂಗ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು. ಹೇಳಿಕೆ ಸಂಬಂಧ ಕೂಡಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಬೇಕು ಹಾಗೂ ದಿಗ್ವಿಜಯ್ ಸಿಂಗ್ ಅವರನ್ನು ಕೂಡಲೇ ಪಕ್ಷದಿಂದ ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ರ್ಯಾಲಿಯೊಂದರಲ್ಲಿ ಮಾತನಾಡಿದ್ದ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಗುಜರಾತ್ ಪ್ರವಾಸೋದ್ಯಮ ಇಲಾಖೆಯ ರಾಯಭಾರಿ ಆಗಿರುವ ಅಮಿತಾಬ್ ಬಚ್ಚನ್ ಅಹ್ಮದಾಬಾದ್ ನಲ್ಲಿರುವ ಕತ್ತೆಗಳ ರಕ್ಷಿತಾರಣ್ಯದ ಬಗ್ಗೆ ಜಾಹೀರಾತಿನಲ್ಲಿ ಮಾಹಿತಿ ನೀಡುವ ದೃಶ್ಯವಿದೆ. ಕತ್ತೆಗಳಿಗಾಗಿ ಪ್ರಚಾರ ಮಾಡುವ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಆದರೆ, ಗುಜರಾತಿನ ಜನತೆ ಕತ್ತೆಗಳಿಗಾಗಿ ಪ್ರಚಾರ ಮಾಡುತ್ತಿದ್ದಾರೆ. ಇದೆಲ್ಲ ಮಾಡಿ ಅವರು ನಾನು ಸ್ಮಶಾನಕ್ಕಾಗಿ ಮಾತ್ರ ಕೆಲಸ ಮಾಡುತ್ತಿದ್ದೇನೆಂದು ಆರೋಪಿಸುತ್ತಾರೆ. ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಳಿ ಈ ಮೂಲಕ ಮನವಿಯೊಂದನ್ನು ಮಾಡಿಕೊಳ್ಳುತ್ತೇನೆ, ಇನ್ನು ಮುಂದೆ ಕತ್ತೆಗಳಿಗಾಗಿ ಪ್ರಚಾರ ಮಾಡಬೇಡಿ ಎಂದು ಹೇಳಿದ್ದರು. 
ಅಖಿಲೇಶ್ ಅವರ ಈ ಹೇಳಿಕೆಗೆ ತಿರುಗೇಟು ನೀಡಿದ್ದ ಪ್ರಧಾನಿ ಮೋದಿಯವರು, ಗುಜರಾತಿನಿಂದ ಸಾವಿರಾರು ಕಿ.ಮೀ ದೂರವಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಕತ್ತೆಗಳ ಮೇಲೆ ಏಕೆ ದಾಳಿ ಮಾಡುತ್ತಿದ್ದಾರೆಂಬುದು ಅರ್ಥವಾಗುತ್ತಿಲ್ಲ. ಅವರಿಗೆ ಕತ್ತೆಗಳ ಬಗ್ಗೆ ಭಯವಿದೆಯೇ? ಪ್ರಾಣಿಗಳು ಅವುಗಳ ಯಜಮಾನರಿಗೆ ನಿಷ್ಠರಾಗಿರುತ್ತವೆ. ನಾನು ಕತ್ತೆಗಳಿಂದಲೇ ಸ್ಫೂರ್ತಿ ಪಡೆದುಕೊಳ್ಳುತ್ತೇನೆ. ಏಕೆಂದರೆ, ನಾನು ಜನರಿಗಾಗಿ ಹಗಲಿರುಳು ಕೆಲಸ ಮಾಡುತ್ತೇನೆಂದು ಹೇಳಿದ್ದರು. 
ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿ ಪ್ರಧಾನಿ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದರು. ಮೋದಿಯವರೇ ನೀವು ಹೇಳಿದ್ದು ಸರಿಯಾಗಿದೆ. ನೀವು ನಿಜಕ್ಕೂ ಕತ್ತೆಗಳಂತೆಯೇ ಕೆಲಸ ಮಾಡುತ್ತೀರಿ ಎಂದು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com