ನಾನು ಎಬಿವಿಪಿಗೆ ಹೆದರಲ್ಲ: ಫೇಸ್​ಬುಕ್ ನಲ್ಲಿ ಕಾರ್ಗಿಲ್​ ಹುತಾತ್ಮ ಯೋಧನ ಪುತ್ರಿ, ಪೋಸ್ಟ್ ವೈರಲ್

ಕಾಂರ್ಗಿಲ್ ಹುತಾತ್ಮ ಯೋಧನ ಪುತ್ರಿ, ಲೇಡಿ ಶ್ರೀ ರಾಮ ಕಾಲೇಜು ವಿದ್ಯಾರ್ಥಿನಿ ಗುರ್​ವೆುೕಹರ್ ಕೌರ್ ದೆಹಲಿ ವಿಶ್ವವಿದ್ಯಾಲಯದ...
ಗುರ್​ವೆುೕಹರ್ ಕೌರ್
ಗುರ್​ವೆುೕಹರ್ ಕೌರ್
Updated on
ನವದೆಹಲಿ: ಕಾಂರ್ಗಿಲ್ ಹುತಾತ್ಮ ಯೋಧನ ಪುತ್ರಿ, ಲೇಡಿ ಶ್ರೀ ರಾಮ ಕಾಲೇಜು ವಿದ್ಯಾರ್ಥಿನಿ ಗುರ್​ವೆುೕಹರ್ ಕೌರ್ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದು, ಇದೀಗ ವೈರಲ್ ಆಗಿದೆ.
ಕೈ ಬರಹವುಳ್ಳ ಘೊಷ ಪಟ್ಟಿಯನ್ನು ಹಿಡಿದು ನಿಂತಿರುವ ಗುರ್​ವೆುೕಹರ್ ಕೌರ್, ನಾನು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ. ನಾನು ಎಬಿವಿಪಿಯಿಂದ ಭಯಗೊಂಡಿಲ್ಲ. ನಾನು ಒಂಟಿಯಲ್ಲ. ನನ ಜತೆಗೆ ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯೂ ಇದ್ದಾರೆ’ ಎಂದು ಬರೆದುಕೊಂಡಿದ್ದಾಳೆ.
ಭಾರತದ ಪ್ರತಿಯೊಬ್ಬ ಪ್ರಜೆಗೂ ಮಾತನಾಡುವ ಹಕ್ಕಿದೆ. ವಾದಿಸುವ ಅವಕಾಶವಿದೆ. ಸರಿ ತಪ್ಪುಗಳನ್ನು ವಿಮಶಿಸುವ ಸ್ವತಂತ್ರವಿದೆ. ಇದನ್ನು ರಾಷ್ಟ್ರ, ಸಂಸ್ಕೃತಿ, ಆಚರಣೆ ಇತ್ಯಾದಿ ಮಾನದಂಡಗಳಡಿ ಹತ್ತಿಕ್ಕುವ ಪ್ರಯತ್ನ ಬೇಡ. ಎಬಿವಿಪಿ ಕಾರ್ಯಕರ್ತರು ತಮ್ಮ ಮೇಲೆ ಕಲ್ಲುಗಳನ್ನು ಎಸೆದು ಗಾಯಗೊಳಿಸಬಹುದು. ಆದರೆ ನಮ್ಮ ತತ್ವಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹುತಾತ್ಮ ಯೋಧನ ಪುತ್ರಿ ಬರೆದುಕೊಂಡಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com