ಮಣಿಪುರ ನಾಶಕ್ಕೆ 70 ವರ್ಷ ಆಡಳಿತ ನಡೆಸಿದ್ದ ಕಾಂಗ್ರೆಸ್ ಜವಾಬ್ದಾರಿ: ರಿಜಿಜು

ಮಣಿಪುರ ರಾಜ್ಯ ನಾಶವಾಗಿರುವುದಕ್ಕೆ 70 ವರ್ಷಗಳ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷವೇ ಜವಾಬ್ದಾರಿಯಾಗಿದೆ ಎಂದು ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು...
ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು (ಸಂಗ್ರಹ ಚಿತ್ರ)
ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು (ಸಂಗ್ರಹ ಚಿತ್ರ)
Updated on: 
ಇಂಫಾಲ: ಮಣಿಪುರ ರಾಜ್ಯ ನಾಶವಾಗಿರುವುದಕ್ಕೆ 70 ವರ್ಷಗಳ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷವೇ ಜವಾಬ್ದಾರಿಯಾಗಿದೆ ಎಂದು ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಸೋಮವಾರ ಹೇಳಿದ್ದಾರೆ. 
ಮಣಿಪುರದ ಚಂದೇಲ್ ನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯನ್ನುದ್ದೇಶಿ ಮಾತನಾಡಿರುವ ಅವರು, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಮಣಿಪುರ ರಾಜ್ಯದಲ್ಲಿ ಇಂದು ಉಗ್ರ ಸಂಘಟನೆಗಳು ತಲೆಯೆತ್ತುತ್ತಿವೆ. 70 ವರ್ಷಗಳ ಕಾಲ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷವೇ ಇದಕ್ಕೆ ನೇರ ಹೊಣೆಯಾಗಿದೆ ಎಂದು ಹೇಳಿದ್ದಾರೆ. 
ರಾಜ್ಯದಲ್ಲಿ ಅಭಿವೃದ್ಧಿ ತಲೆಯೆತ್ತಬೇಕಾದರೆ, ಈ ಬಾರಿ ಚುನಾವಣೆಯಲ್ಲಿ ಮಣಿಪುರದಿಂದ ಕಾಂಗ್ರೆಸ್ ನ್ನು ಹೊಡೆದೋಡಿಸುವ ಅಗತ್ಯವಿದೆ. ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ನಾವಿದ್ದೇವೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com